ಇತ್ತೀಚಿನ ಸುದ್ದಿ
ಬಿರುಸಿನ ಗಾಳಿ ಮಳೆ: ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕುಗಳ ಶಾಲೆಗಳಿಗೆ ಇಂದು ರಜೆ
26/07/2024, 23:53
ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪರ ತಾಲೂಕಿನ ಅಂಗನವಾಡಿ , ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ಜುಲೈ 27 ಶನಿವಾರದಂದು ಒಂದು ದಿನ ಮಾತ್ರ ರಜೆ ಸಾರಲಾಗಿದೆ.
ಕಡೂರು, ತರೀಕೆರೆ ಹಾಗೂ ಅಜ್ಜಂಪುರ ತಾಲೂಕಿಗೆ ರಜೆ ಇಲ್ಲ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.