8:13 PM Wednesday23 - September 2026
ಬ್ರೇಕಿಂಗ್ ನ್ಯೂಸ್
ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ…

ಇತ್ತೀಚಿನ ಸುದ್ದಿ

ಹೆವಿ ವೆಹಿಕಲ್ ಡೈವಿಂಗ್, ಡ್ರೋನ್ ಚಾಲನ ತರಬೇತಿ, ಬ್ಯೂಟಿ ಪಾರ್ಲರ್ ಕೋರ್ಸ್: ಅಲ್ಪಸಂಖ್ಯಾತರ ಸ್ವಯಂ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

25/11/2024, 13:52

ಮಂಗಳೂರು(reporterkarnataka.com): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಬೌದ್ಧ, ಕ್ರಿಶ್ಚಿಯನ್, ಜೈನ್, ಮುಸ್ಲಿಂ, ಪಾರ್ಸಿ ಸಿಖ್ ಜನಾಂಗದ 2024-25ನೇ ಸಾಲಿಗೆ ನಿಗಮವು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗ ಅಥವಾ ಎಂಎನ್‍ಸಿ, ಬಿಪಿಒಗಳು ಮತ್ತು ಇತರ ಚಟುವಟಿಕೆಗಳಲ್ಲಿ ಉದ್ಯೋಗಕ್ಕಾಗಿ ಹೆವಿ ವೆಹಿಕಲ್ ಡೈವಿಂಗ್, ಡ್ರೋನ್ ಚಾಲನ ತರಬೇತಿ, ಬ್ಯೂಟಿ ಪಾರ್ಲರ್ ಕೋರ್ಸ್ ಮತ್ತು ಮಹಿಳೆಯರಿಗೆ) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆಗಳು: ಅರ್ಜಿದಾರರು ರಾಜ್ಯದ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. 18 ರಿಂದ 45 ವರ್ಷದೊಳಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.6 ಲಕ್ಷಗಿಂತ ಕಡಿಮೆಯಿರಬೇಕು. ಆಯ್ಕೆಯಾದ ಅರ್ಜಿದಾರರು ಕಡ್ಡಾಯವಾಗಿ ತರಬೇತಿಯನ್ನು ಪೂರ್ಣಗೊಳಿಸಬೇಕು. ಕನಿಷ್ಟ ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಈ ಹಿಂದೆ ರಾಜ್ಯ ಅಥವಾ ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳಲ್ಲಿ ತರಬೇತಿ ಪಡೆದಿರಬಾರದು.
ಆಸಕ್ತ ಅಭ್ಯರ್ಥಿಗಳು ವೆಬ್‍ಸೈಟ್ ಞmಜಛಿoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 5 ಕೊನೆಯ ದಿನ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ಮೌಲಾನಾ ಅಜಾದ್ ಭವನ 2ನೇ ಮಹಡಿ, ಪಾಂಡೇಶ್ವರ, ಮಂಗಳೂರು ತಾಲೂಕು-575001 ಜಿಲ್ಲಾ ವ್ಯವಸ್ಥಾಪಕರ ದೂರವಾಣಿ ಸಂಖ್ಯೆ :- 0824-2951644 ಅಥವಾ ಸಹಾಯವಾಣಿ ಸಂಖ್ಯೆ:8277799990 ಸಂಪರ್ಕಿಸಬಹುದು. ಅಥವಾ 1)ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕೆಳಗಿನ ಮಹಡಿ, ಭಾರತ್ ಕಮರ್ಶಿಯಲ್ ಕಾಂಪ್ಲೆಕ್ಸ್, ಬಿ.ಸಿ.ರೋಡು ಬಂಟ್ವಾಳ ದೂರವಾಣಿ ಸಂಖ್ಯೆ : 08255-232470. 2) ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತಾಲೂಕು ಪಂಚಾಯತ್ ವಾಣಿಜ್ಯ ಸಂಕೀರ್ಣ ಕಟ್ಟಡ, ತಾಲೂಕು ಪಂಚಾಯತ್ ಹತ್ತಿರ ಬೆಳ್ತಂಗಡಿ ದೂರವಾಣಿ ಸಂಖ್ಯೆ :- 08256-295335 3) ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತಾಲೂಕು ಪಂಚಾಯತ್ ಸಾಮಥ್ರ್ಯ ಸೌಧ ಕಟ್ಟಡ, ಪುತ್ತೂರು ತಾಲೂಕು ದೂರವಾಣಿ ಸಂಖ್ಯೆ:08251-237078. 4) ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತಾಲೂಕು ಪಂಚಾಯತ್ ಕಟ್ಟಡ, ಸುಳ್ಯ ದೂರವಾಣಿ ಸಂಖ್ಯೆ 08257- 230666, ಸಂಪರ್ಕಿಸುವಂತೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು