5:17 PM Monday31 - March 2025
ಬ್ರೇಕಿಂಗ್ ನ್ಯೂಸ್
PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌ Chikkamagaluru | ಬಾಲ ಹಿಡಿದು ಎತ್ತಿದ ಉರಗ ತಜ್ಞರು: ನುಂಗಿದ್ದ 10 ಮೊಟ್ಟೆಗಳನ್ನು… Speaker Talking | ವಿಧಾನ ಸೌಧಕ್ಕೆ ವರ್ಣರಂಜಿತ ದೀಪಾಲಂಕಾರ; ಯಾವಾಗ ಉದ್ಘಾಟನೆ?; ಸ್ಪೀಕರ್… ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ: ಹಾಲು ದರ ಏರಿಕೆಗೆ ಕೇಂದ್ರ… ಕೋಲಾರ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿ; ತೇರಹಳ್ಳಿ… Protest in Delhi | ‘ಉದ್ಯೋಗ ಕೊಡಿ ಅಥವಾ ಅಧಿಕಾರ ತ್ಯಜಿಸಿ’: ಕೇಂದ್ರ… Medical College | ಗದಗ ಮೆಡಿಕಲ್ ಕಾಲೇಜಿಗೆ ಕೆ.ಎಚ್. ಪಾಟೀಲ್ ಹೆಸರು: ರಾಜ್ಯ…

ಇತ್ತೀಚಿನ ಸುದ್ದಿ

HDK | ಮಂಡ್ಯ ಕೃಷಿ ವಿವಿ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸುವ ಛತ್ರಿಬುದ್ಧಿ ನನಗಿಲ್ಲ; ಕೇಂದ್ರ ಸಚಿವ ಕುಮಾರಸ್ವಾಮಿ ತಿರುಗೇಟು

27/03/2025, 14:55

ನವದೆಹಲಿ(reporterkarnataka.com): ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ನನಗಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ನನ್ನ ಬಗ್ಗೆ ಹುಟ್ಟಿಕೊಂಡಿರುವ ಸಂದೇಹಾತ್ಮಕ, ರಾಜಕೀಯ ದುರುದ್ದೇಶದ ಅಪಪ್ರಚಾರದ ನಡವಳಿಕೆ ದುಃಖಕರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ಕೃಷಿ ವಿವಿ ಸ್ಥಾಪನೆ ಬಗ್ಗೆ ನನ್ನ ಹೃದಯಪೂರ್ವಕ ಸ್ವಾಗತವಿದೆ. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ನಾನೆಂದೂ ಬೆರೆಸಿಲ್ಲ, ಇದು ನನ್ನ ವ್ಯಕ್ತಿತ್ವಕ್ಕೆ ಸಲ್ಲದ ನಡವಳಿಕೆ. ವಿವಿ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ನನಗಿಲ್ಲ ಎಂದು ಟೀಕಾಕಾರರಿಗೆ ಅವರು ಟಾಂಗ್ ನೀಡಿದ್ದಾರೆ.
ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದವನು ನಾನು. ಮಂಡ್ಯ ಜಿಲ್ಲೆ ಹಿತಕ್ಕೆ ಸಂಬಂಧಿಸಿ ಅಲ್ಲಿನ ಜನಪ್ರತಿನಿಧಿಯಾಗಿ ನನ್ನದೂ ಹೊಣೆಗಾರಿಕೆ ಇದೆ. ಈ ಬಗ್ಗೆ ನನ್ನಲ್ಲಿ ಗೊಂದಲ ಇಲ್ಲ, ಇದು ಸ್ಪಷ್ಟ. ಮುಖ್ಯಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನೀಡಿರುವ ಬಜೆಟ್ ಕೊಡುಗೆ ಬಗ್ಗೆ ನಾನು ಹೊಸದಾಗಿ ಹೇಳಬೇಕಿಲ್ಲ. ನನಗೆ ರಾಜಕೀಯವಾಗಿ ಶಕ್ತಿ ತುಂಬಿದ, ರಕ್ತಸಂಬಂಧಕ್ಕೂ ಮೀರಿ ಅವಿನಾಭಾವ ಬಾಂಧವ್ಯದ ದ್ಯೋತಕವಾಗಿರುವ ಮಂಡ್ಯ ಜನರ- ನನ್ನ ನಡುವೆ ಹುಳಿ ಹಿಂಡುವ ವ್ಯರ್ಥ ಪ್ರಯತ್ನ ಬೇಡ ಎಂದು ಅವರು ಕಿವಿಮಾತು ಹೇಳಿದ್ದಾರೆ.
ನನ್ನನ್ನು ಸಂಸದನನ್ನಾಗಿ ಆಯ್ಕೆ ಮಾಡಿರುವ ಮಂಡ್ಯ ಜನತೆಗೆ ನಾನೆಂದಿಗೂ ಆಭಾರಿ. ಅದಕ್ಕೆ ತಕ್ಕಂತೆ ಕ್ಷೇತ್ರದಲ್ಲಿ ಅನುಷ್ಠಾನಗೊಳ್ಳಬೇಕಿರುವ ಕಾರ್ಯಕ್ರಮ, ಯೋಜನೆಗಳ ಬಗ್ಗೆ ಅವಿರತವಾಗಿ ಕೆಲಸ ಮಾಡುತ್ತಿದ್ದೇನೆ. ಕೇಂದ್ರ ಸಚಿವನಾಗಿ ಇಡೀ ರಾಜ್ಯದ ಮತ್ತು ಸಂಸದನಾಗಿ ಮಂಡ್ಯದ ಆಶೋತ್ತರಗಳ ಈಡೇರಿಕೆಗೆ ನಾನು ಬದ್ಧ, ಅದರಲ್ಲಿ ರಾಜಿ ಪ್ರಶ್ನೆ ಇಲ್ಲ ಎಂದು ಕೇಂದ್ರ ಸಚಿವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.
ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿರುವ ತಿಳಿಗೇಡಿಗಳು, ಅದಕ್ಕೆ ತುಪ್ಪ ಸುರಿಯುವ ಸೋಗಲಾಡಿಗಳು ಸತ್ಯ ಅರಿತುಕೊಳ್ಳಲಿ ಎಂದು ಆಶಿಸುತ್ತೇನೆ ಎಂದು ಅವರು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು