8:09 PM Tuesday25 - March 2025
ಬ್ರೇಕಿಂಗ್ ನ್ಯೂಸ್
ಅಂಬೇಡ್ಕರ್‌ ಗೆ ಜೀವಮಾನವಿಡಿ ಕಾಂಗ್ರೆಸ್‌ ಅಪಮಾನ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ Constitution | ಕಾಂಗ್ರೆಸ್ ದೇಶದ್ರೋಹಿಗಳ ಪಕ್ಷ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ… Delhi | ಸಂವಿಧಾನ ವಿರೋಧಿ ರಾಜ್ಯ ಸರಕಾರ ರಾಜೀನಾಮೆ ನೀಡಲಿ: ಮಾಜಿ ಸಿಎಂ… Honey Trap | ಬಿಜೆಪಿ ಬಳಿ ಸಿಡಿ‌ ಫ್ಯಾಕ್ಟರಿಯೇ ಇದೆ; ಅವರ ಕಾಲದಲ್ಲಿ… Speaker | ಅಶಿಸ್ತು, ಅಗೌರವ ತೋರಿಸಿದರೆ ಮುಂದಿನ ಅಧಿವೇಶನದಲ್ಲೂ ಸಸ್ಪೆಂಡ್ ಮಾಡುವೆ: ಸ್ಪೀಕರ್… ಚಿಕ್ಕಮಗಳೂರು: ಸಿಡಿಲು ಬಡಿದು ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೃದ್ದ ಮಹಿಳೆ ಸಾವು IndiGo6E | ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ: ಕೇಂದ್ರ ಸಚಿವ ಪ್ರಹ್ಲಾದ್… FIR Against Madhwaraj | ಮಹಿಳೆಯ ಕಟ್ಟಿ ಹಾಕಿ ಹಲ್ಲೆ ಪ್ರಕರಣದ ಸಮರ್ಥನೆ?:… Ugadi | ರಾಜಭವನದದಲ್ಲಿ ಚಿಗುರಿದ ‘ಚಂದನ’ದ ‘ಚೈತ್ರಾಂಜಲಿ’: ಗಾಜಿನ ಮನೆಯಲ್ಲಿ ಮೂಡಿ ಬಂತು… Karnataka Bundh | ಪ್ರತಿಷ್ಠೆಗಾಗಿ ಅನಾವಶ್ಯಕ ಬಂದ್ ಕರೆ ಕೊಡಬಾರದು: ಮಾಜಿ ಗೃಹ…

ಇತ್ತೀಚಿನ ಸುದ್ದಿ

HDK | ಮುಸ್ಲಿಮರಿಗೆ ಶೇ. 4 ಗುತ್ತಿಗೆ ಮೀಸಲಾತಿ ವಿರುದ್ಧ ಹೋರಾಟದಲ್ಲಿ ಬಿಜೆಪಿ ಜತೆ ಭಿನ್ನಾಭಿಪ್ರಾಯ ಇಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ

24/03/2025, 18:35

ನವದೆಹಲಿ(reporterkarnataka.com): ರಾಜ್ಯ ಸರಕಾರ ಮುಸ್ಲಿಮರಿಗೆ ಶೇ. 4% ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜಾತ್ಯತೀತ ಜನತಾದಳ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ವರದಿಯಾಗಿರುವ ವರದಿಗಳು ಸತ್ಯಕ್ಕೆ ದೂರವಾದದ್ದು ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ ಎನ್ ಡಿಎ ‘ಸಮನ್ವಯ ಸಮಿತಿ’ ಸಭೆ ನಡೆದು ಎಲ್ಲಾ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರಕಾರದ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಾಗಿತ್ತು. ಆ ಸಭೆಯಲ್ಲಿ ಸ್ವತಃ ನಾನೂ ಭಾಗವಹಿಸಿದ್ದೆ.
ಕಾಂಗ್ರೆಸ್ ಸರಕಾರವು ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ.
ಜೆಡಿಎಸ್ – ಬಿಜೆಪಿ ಪಕ್ಷಗಳು ಈಗಾಗಲೇ ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿವೆ, ಮುಂದೆಯೂ ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ಜೆಡಿಎಸ್ ನ ಅಚಲ ನಿಲುವು ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು