8:15 PM Wednesday10 - December 2025
ಬ್ರೇಕಿಂಗ್ ನ್ಯೂಸ್
ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ… ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

HDK | ಗ್ರೇಟರ್ ಬೆಂಗಳೂರು ಅಲ್ಲ, ಲೂಟರ್ ಗಳ ಬೆಂಗಳೂರು: ರಾಜ್ಯ ಸರಕಾರ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ

19/05/2025, 14:44

ನವದೆಹಲಿ(reporterkarnataka.com): ಕರ್ನಾಟಕದ ರಾಜಧಾನಿ ಬೆಂಗಳೂರು ನಗರ ಮಳೆ ಅನಾಹುತಕ್ಕೆ ಸಿಕ್ಕಿ ನಲುಗುತ್ತಿರುವ ಬಗ್ಗೆ ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಸಂಗ್ರಹ ಆಗುತ್ತಿರುವ ಆದಾಯ, ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಗ್ರೇಟರ್ ಬೆಂಗಳೂರು ಹೆಚ್ಚು ಮಳೆಯಾದರೆ ಮುಳುಗುತ್ತದೆ! ಕಡಿಮೆ ಸುರಿದರೆ ತೇಲುತ್ತದೆ! ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
ರಸ್ತೆಗಳಲ್ಲಿಯೇ ಕೆರೆ, ಚರಂಡಿ! ಗುಂಡಿಗೆ ಹಿಡಿ ಮಣ್ಣಾಕುವುದಕ್ಕೂ ಬಿಡಿಗಾಸಿಲ್ಲ. ಸುರಂಗಕ್ಕೆ ಮಾತ್ರ ಸಾವಿರಾರು ಕೋಟಿ ಟೆಂಡರು! ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು! ವಾರಕ್ಕೊಮ್ಮೆ ತೆರಿಗೆ ಬರೆ, ದರ ಏರಿಕೆ! ಜನರೆಂದರೆ ಜೀವರಹಿತ ಕಲ್ಲುಬಂಡೆಗಳೇ? ಮನಸೋಇಚ್ಛೆ ಒಡೆದು ಬಡಿದು ನುಂಗಲು!? ನಾಡು ಎಂದರೆ ಕಲ್ಲು ಬಂಡೆಗಳಲ್ಲ,
ನಾಡು ಎಂದರೆ ಮನುಷ್ಯರು ಎಂದು ನಗರದ ಉಸ್ತುವಾರಿ ಹೊಂದಿರುವವರ ವಿರುದ್ಧ ಕೇಂದ್ರ ಸಚಿವರು ಹರಿಹಾಯ್ದಿದ್ದಾರೆ.
ಕೆರೆಯ ನೀರನು ಕೆರೆಗೆ ಚೆಲ್ಲುತ್ತಿಲ್ಲವೇಕೆ?
ಕೆರೆ ನೀರಿಗೆ ಕಮೀಷನ್ ಕೋಡಿ ಬಿದ್ದಿದೆ!
ತೆರಿಗೆ ಥೈಲಿ, ಬೆಲೆ ಸುಲಿಗೆ ಹಣವೆಲ್ಲಿ? ಜಾಹೀರಾತುಗಳಲ್ಲಿ ಬಣ್ಣಬಣ್ಣವಾಗಿ ಕಾಣುವ ಬೆಂಗಳೂರು, ನೈಜವಾಗಿ ನಿಟ್ಟುಸಿರು ಬಿಡುತ್ತಿದೆ. ಏಕೆ? ಬರುತ್ತಿರುವ ಆದಾಯ ಎಲ್ಲಿ ಹೋಗುತ್ತಿದೆ?
ನಗರ ಜನರ ಬೆವರಿನ ಹಣ ಏನೇನಾಗುತ್ತಿದೆ?
ಕಲೆಕ್ಷನ್ ಎಷ್ಟು? ವೆಚ್ಚ ಎಷ್ಟು? ಸ್ವಾಹಾ ಎಷ್ಟು? ಎಂದು ಅವರು ಪ್ರಶ್ನಿಸಿದ್ದಾರೆ.
ಗುಂಡಿ ಮುಚ್ಚಲು ಗತಿ ಇಲ್ಲ. ಚರಂಡಿ ಕಸ ಎತ್ತಲು ದಿಕ್ಕಿಲ್ಲ. ನಿತ್ಯವೂ ಗುದ್ದಲಿಪೂಜೆ, ಶಂಕುಸ್ಥಾಪನೆ!! ಹೊಸ ಶೀಶೆ, ಹಳೇ ಮದ್ಯ.ಹಳೇ ಕಾಮಗಾರಿ, ಹೊಸ ಹೊಸ ಬಿಲ್ಲು! ಗ್ರೇಟರ್ ಬೆಂಗಳೂರು ಅಲ್ಲ,
ಲೂಟರ್’ಗಳ ಬೆಂಗಳೂರು! ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು