6:01 AM Wednesday9 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

HDK | ಗ್ರೇಟರ್ ಬೆಂಗಳೂರು ಅಲ್ಲ, ಲೂಟರ್ ಗಳ ಬೆಂಗಳೂರು: ರಾಜ್ಯ ಸರಕಾರ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ

19/05/2025, 14:44

ನವದೆಹಲಿ(reporterkarnataka.com): ಕರ್ನಾಟಕದ ರಾಜಧಾನಿ ಬೆಂಗಳೂರು ನಗರ ಮಳೆ ಅನಾಹುತಕ್ಕೆ ಸಿಕ್ಕಿ ನಲುಗುತ್ತಿರುವ ಬಗ್ಗೆ ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಸಂಗ್ರಹ ಆಗುತ್ತಿರುವ ಆದಾಯ, ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಗ್ರೇಟರ್ ಬೆಂಗಳೂರು ಹೆಚ್ಚು ಮಳೆಯಾದರೆ ಮುಳುಗುತ್ತದೆ! ಕಡಿಮೆ ಸುರಿದರೆ ತೇಲುತ್ತದೆ! ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
ರಸ್ತೆಗಳಲ್ಲಿಯೇ ಕೆರೆ, ಚರಂಡಿ! ಗುಂಡಿಗೆ ಹಿಡಿ ಮಣ್ಣಾಕುವುದಕ್ಕೂ ಬಿಡಿಗಾಸಿಲ್ಲ. ಸುರಂಗಕ್ಕೆ ಮಾತ್ರ ಸಾವಿರಾರು ಕೋಟಿ ಟೆಂಡರು! ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು! ವಾರಕ್ಕೊಮ್ಮೆ ತೆರಿಗೆ ಬರೆ, ದರ ಏರಿಕೆ! ಜನರೆಂದರೆ ಜೀವರಹಿತ ಕಲ್ಲುಬಂಡೆಗಳೇ? ಮನಸೋಇಚ್ಛೆ ಒಡೆದು ಬಡಿದು ನುಂಗಲು!? ನಾಡು ಎಂದರೆ ಕಲ್ಲು ಬಂಡೆಗಳಲ್ಲ,
ನಾಡು ಎಂದರೆ ಮನುಷ್ಯರು ಎಂದು ನಗರದ ಉಸ್ತುವಾರಿ ಹೊಂದಿರುವವರ ವಿರುದ್ಧ ಕೇಂದ್ರ ಸಚಿವರು ಹರಿಹಾಯ್ದಿದ್ದಾರೆ.
ಕೆರೆಯ ನೀರನು ಕೆರೆಗೆ ಚೆಲ್ಲುತ್ತಿಲ್ಲವೇಕೆ?
ಕೆರೆ ನೀರಿಗೆ ಕಮೀಷನ್ ಕೋಡಿ ಬಿದ್ದಿದೆ!
ತೆರಿಗೆ ಥೈಲಿ, ಬೆಲೆ ಸುಲಿಗೆ ಹಣವೆಲ್ಲಿ? ಜಾಹೀರಾತುಗಳಲ್ಲಿ ಬಣ್ಣಬಣ್ಣವಾಗಿ ಕಾಣುವ ಬೆಂಗಳೂರು, ನೈಜವಾಗಿ ನಿಟ್ಟುಸಿರು ಬಿಡುತ್ತಿದೆ. ಏಕೆ? ಬರುತ್ತಿರುವ ಆದಾಯ ಎಲ್ಲಿ ಹೋಗುತ್ತಿದೆ?
ನಗರ ಜನರ ಬೆವರಿನ ಹಣ ಏನೇನಾಗುತ್ತಿದೆ?
ಕಲೆಕ್ಷನ್ ಎಷ್ಟು? ವೆಚ್ಚ ಎಷ್ಟು? ಸ್ವಾಹಾ ಎಷ್ಟು? ಎಂದು ಅವರು ಪ್ರಶ್ನಿಸಿದ್ದಾರೆ.
ಗುಂಡಿ ಮುಚ್ಚಲು ಗತಿ ಇಲ್ಲ. ಚರಂಡಿ ಕಸ ಎತ್ತಲು ದಿಕ್ಕಿಲ್ಲ. ನಿತ್ಯವೂ ಗುದ್ದಲಿಪೂಜೆ, ಶಂಕುಸ್ಥಾಪನೆ!! ಹೊಸ ಶೀಶೆ, ಹಳೇ ಮದ್ಯ.ಹಳೇ ಕಾಮಗಾರಿ, ಹೊಸ ಹೊಸ ಬಿಲ್ಲು! ಗ್ರೇಟರ್ ಬೆಂಗಳೂರು ಅಲ್ಲ,
ಲೂಟರ್’ಗಳ ಬೆಂಗಳೂರು! ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು