3:47 AM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Health Minister | ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ಮೇಲೆ ಕ್ರಮಕೈಗೊಳ್ಳಲಾಗಿದೆ: ಸಚಿವ ದಿನೇಶ್ ಗುಂಡೂರಾವ್

05/03/2025, 23:05

ಬೆಂಗಳೂರು (reporterkarnataka.com):ಕಲ್ಯಾಣ ಕರ್ನಾಟಕದ ವ್ಯಾಪ್ತಿಯಲ್ಲಿ ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ಮೇಲೆ ಕ್ರಮಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಸಭೆಯ ಅಧಿವೇಶನದಲ್ಲಿ ಇಂದು ಸದಸ್ಯರಾದ ಶರಣಗೌಡ ಕಂದಕೂರ ಅವರು ಕಳಪೆ ಗುಣಮಟ್ಟದ ಔಷಧಿ ಪೂರೈಕೆಯಿಂದ ಬಾಣಂತಿಯರು ಸರಣಿ ಸಾವನ್ನಪ್ಪಿರುವ ಕುರಿತು ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿದ ಸಚಿವರು, ಔಷಧಿ ಸರಬರಾಜನ್ನು ನಿಲ್ಲಿಸಲಾಗಿದೆ. 12 ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡಲಾಗಿದೆ.
ಕಾನೂನಿನ ಪ್ರಕಾರ ಹೋಗಬೇಕಾಗಿರುವುದರಿಂದ ನಮ್ಮ ಕಡೆಯಿಂದ ಆಗುವ ಕ್ರಮಕೈಗೊಳ್ಳಲಾಗಿದೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು,ಮುಂದಿನ ದಿನ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಕೇಂದ್ರ ಸರ್ಕಾರಕ್ಕೂ ಪತ್ರ ಬರೆಯಲಾಗಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು