2:53 AM Friday13 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

Health | ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ: ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

12/05/2025, 21:45

ಬೆಂಗಳೂರು(reporterkarnataka.com):ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದ ಅಡಿಯಲ್ಲಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನ ಹೆಚ್ಚಿಸಲು ಸರ್ಕಾರಿ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಜೀವಸಾರ್ಥಕತೆ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯು ಕೇಂದ್ರಗಳನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.‌


ರಾಜ್ಯದ ಮೂರು ಸ್ಥಳಗಳಲ್ಲಿ BMST ಅಡಿಯಲ್ಲಿ HLA ಪ್ರಯೋಗಾಲಯಗಳನ್ನು ಸ್ಥಾಪಿಸಲು KMC&RI ಮಾದರಿಯನ್ನು ಅನ್ವೇಷಿಸುಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.‌ ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟವರಿಂದ ಅಂಗಾಂಗಗಳನ್ನು ಪಡೆಯುವ ಪ್ರಯತ್ನಗಳು ಸರ್ಕಾರಿ ಜಿಲ್ಲಾಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚಾಗಬೇಕು. ಈ ಬಗ್ಗೆ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ ಏಕೆ ಎಂದು ಅಧಿಕಾರಿಗಳನ್ನ ಪ್ರಶ್ನಿಸಿದ ಸಚಿವರು, ಎಲ್ಲಾ ಜಿಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರಗಳನ್ನು ಪ್ರಾರಂಭಿಸಿ ಎಂದರು.
ರಾಜ್ಯದಲ್ಲಿ ಅಂಗಾಂಗ ದಾನ ಮತ್ತು ಕಸಿ ಪ್ರಯತ್ನಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಪ್ರಮುಖ ನಿರ್ಧಾರಗಳನ್ನು ಸಚಿವರ ನೇತೃತ್ವದ ಸಭೆಯಲ್ಲಿ ತೆಗೆದುಕೊಳ್ಳಲಾಯಿತು. ಜೀವಸಾರ್ಥಕತೆ ಸೊಸೈಟಿಯ ನೋಂದಣಿಯನ್ನು ನವೀಕರಿಸಲಾಗುವುದು ಮತ್ತು ಕಾರ್ಯಾಚರಣಾ ವಲಯಗಳ ಸಂಖ್ಯೆಯನ್ನು ಐದರಿಂದ ಏಳಕ್ಕೆ ವಿಸ್ತರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಅಲ್ಲದೇ ಸ್ಟೀರಿಂಗ್ ಸಮಿತಿಯನ್ನು ರಚಿಸುವುದರ ಜೊತೆಗೆ ಅಂಗಾಂಗ ವಿತರಣೆ ಸಮರ್ಪಕವಾಗಿ ಒದಗಿಸಲು ಮೂತ್ರಪಿಂಡ ಹಂಚಿಕೆ ನೀತಿಯನ್ನು ಸಹ ಪರಿಷ್ಕರಿಸಲು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು