ಇತ್ತೀಚಿನ ಸುದ್ದಿ
Health | ರೋಗಿಗೆ ಆತ್ಮವಿಶ್ವಾಸವೇ ದಿವ್ಯೌಷಧ: ಲೇಡಿಗೋಷನ್ ಆಸ್ಪತ್ರೆಗೆ ಭೇಟಿ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಶ್ಲಾಘನೆ
21/02/2025, 21:58

ಮಂಗಳೂರು(reporterkarnataka.com): ಒಬ್ಬ ರೋಗಿಗೆ ಆತ್ಮವಿಶ್ವಾಸವೇ ದಿವ್ಯೌಷಧ. ಒಂದು ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವ ಭರವಸೆ ಸಿಕ್ಕಿದರೆ ಆತ ಎಲ್ಲವನ್ನೂ ಗೆದ್ದಂತೆ. ಇದಕ್ಕೆ ಉತ್ತಮ ಉದಾಹರಣೆ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಹೇಳಿದರು.
ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಆಸ್ಪತ್ರೆಯ ಅತ್ಯಾಧುನಿಕ ಸೌಲಭ್ಯಗಳನ್ನು ಪರಿಶೀಲಿಸಿ, ಸರ್ಕಾರಿ ಆಸ್ಪತ್ರೆಯೊಂದು ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್, ಆರ್‌ಎಂಒ ಡಾ.ಜಗದೀಶ್ ಅವರ ಅವಿರತ ಶ್ರಮದಿಂದ ನಗರದ ಖಾಸಗಿ ಆಸ್ಪತ್ರೆಯನ್ನೂ ಮೀರಿಸುವಂತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು.
ಆಸ್ಪತ್ರೆಯ ಅಧೀಕ್ಷಕ ಡಾ.ದುರ್ಗಾಪ್ರಸಾದ್, ಆರ್‌ಎಂಒ ಡಾ.ಜಗದೀಶ್ ಅವರ ಕಾರ್ಯವನ್ನು ಶ್ಲಾಘಿಸಿ ಗೌರವಿಸಲಾಯಿತು.
ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಪದ್ಮನಾಭ ಅಮೀನ್, ಪ್ರಮೀಳಾ ಈಶ್ವರ್, ಶಶೀಧರ ಕೊಠಾರಿ, ಅನೀಲ್, ಕೊಂಕಣಿ ಸಾಹಿತ್ಯ ಅಕಾಡೆಮಿ ಸದಸ್ಯ ಸಮರ್ಥ್ ಭಟ್ ಮೊದಲಾದವರು ಜತೆಗಿದ್ದರು.