10:48 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಹಾಸನದಲ್ಲಿ ಹೃದಯ ವಿದ್ರಾವಕ ಘಟನೆ : ಪ್ರಿವೆಡ್ಡಿಂಗ್ ಶೂಟ್ ಗೆ ತೆರಳುವಾಗಲೇ ಭೀಕರ ಅಪಘಾತ: ವರ ದುರ್ಮರಣ

30/04/2026, 20:57

ಹಾಸನ(reporterkarnataka.com): ಹಾಸನದಲ್ಲಿ ಹೃದಯ ವಿದ್ರಾವಕ ಘಟನೆ ಒಂದು ನಡೆದಿದ್ದು ಪ್ರೀವೆಡ್ಡಿಂಗ್ ಶೂಟ್ ಗೆ ಕಾರಿನಲ್ಲಿ ವರ ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ವೇಗವಾಗಿ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಯುವಕನನ್ನು ಮನು ಎಲ್‌.ಎನ್. (29) ಎಂದು ಗುರುತಿಸಲಾಗಿದೆ. ಇವರು ಬೇಲೂರು ತಾಲ್ಲೂಕಿನ ಲಕ್ಕುಂದ ಗ್ರಾಮದ ದರ್ಬಾರ್ ಪೇಟೆ ನಿವಾಸಿಯಾಗಿದ್ದರು. ಮೇ 10ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ನಿಶ್ಚಯವಾಗಿತ್ತು. ಆಲೂರು ಬೈರಾಪುರ ರಸ್ತೆಯಲ್ಲಿರುವ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ಮದುವೆ ನಿಗದಿಯಾಗಿತ್ತು.
ಮದುವೆಗೆ ಎರಡೂ ಕುಟುಂಬಗಳಲ್ಲಿ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಈ ನಡುವೆ ಇಂದು ಬೆಳಿಗ್ಗೆ ಮನು ಅವರು ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ವಧುವನ್ನು ಕರೆತರಲು ತಮ್ಮ ವಿಟಾರಾ ಬ್ರೆಝಾ ಕಾರಿನಲ್ಲಿ ಒಬ್ಬರೇ ಹೊರಟಿದ್ದರು. ಕಾರು ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ತಲುಪಿದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮನು ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಇನ್ನೇನು ಕೆಲವೇ ದಿನಗಳಲ್ಲಿ ಮಗನ ಮದುವೆ ಮಾಡಿ ಸಂಭ್ರಮಿಸಬೇಕಿದ್ದ ಪೋಷಕರು, ಮಗನ ಹಠಾತ್ ಸಾವು ಕೇಳಿ ಆಘಾತಕ್ಕೊಳಗಾಗಿದ್ದಾರೆ. ಮಗನನ್ನು ಕಳೆದುಕೊಂಡ ಪೋಷಕರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ. ಘಟನಾ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು