11:27 PM Monday5 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ ಬೆಂಕಿ

20/03/2026, 18:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಬಿಸಿಲ‌ ಧಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿದಿದೆ.
ಕುದುರೆಮುಖ ರಾಷ್ಟ್ರೀಯ ಅರಣ್ಯ ತಪ್ಪಲಿನಲ್ಲಿರುವ ಶೋಲಾ ಹುಲ್ಲುಗಾವಲು ಉರಿಯುತ್ತಿದೆ. ಶೃಂಗೇರಿ ತಾಲೂಕಿನ ಕೆರೆಕಟ್ಟೆ ವಲಯದ ಮಾಣಿಕ್ಯಬೆಟ್ಡ, ವಾಲೀಕುಂಜಗಿರಿ ಸಾಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
25ಕ್ಕೂ ಹೆಚ್ಚು ಕಡೆ ಕಿಡಿಗೇಡಿಗಳು ಬೆಂಕಿ ಹಚ್ಚಿರೋ ಶಂಕೆ ವ್ಯಕ್ತವಾಗಿದೆ.
ನೆಲದಲ್ಲಿ ಗೂಡುಕಟ್ಟುವ ಪಕ್ಷಿ, ಪ್ರಾಣಿಗಳು, ಅಪರೂಪದ ಸಸ್ಯಸಂಪತ್ತು ಸುಟ್ಟು ಹೋಗಿರೋ ಸಾಧ್ಯತೆಯಿದೆ.
ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನೂರಾರು ಎಕರೆ ಅರಣ್ಯ ನಾಶವಾಗಿದೆ ಎಂದು ಆರೋಪಿಸಲಾಗಿದೆ.
ಅರಣ್ಯ ವೀಕ್ಷಕರ ನೇಮಕ ಮಾಡಿಕೊಳ್ಳದೇ ಇರೋದೇ ಅನಾಹುತಕ್ಕೆ ಕಾರಣ ಎನ್ನಲಾಗಿದೆ.


ಬೆಂಕಿ ನಿಯಂತ್ರಣ ರೇಖೆ, ವೀಕ್ಷಣಾ ಗೋಪುರ ಯಾವುದನ್ನೂ ಮಾಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅರಣ್ಯ ವಾರದಿಂದ ಹೊತ್ತಿ ಉರಿಯುತ್ತಿದ್ದರೂ ಸ್ಥಳಕ್ಕೆ ಯಾರೂ ಭೇಟಿ ನೀಡಿಲ್ಲ ಎಂದು ಸ್ಥಳೀಯರ ಉ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅರಣ್ಯ ಸಚಿವರು ಸೂಕ್ತ ಕ್ರಮಕೈಗೊಳ್ಳಬೇಕೆಂದು ಪರಿಸರವಾದಿಗಳ ಆಗ್ರಹವಾಗಿದೆ.
ಕಾರ್ಕಳ ಡಿಎಫ್ಓ ಸಿವರಾಮ್ ಬಾಬು ವಿರುದ್ಧ ಪರಿಸರವಾದಿಗಳು, ಸ್ಥಳಿಯರ ಆಕ್ರೋಶ ವ್ಯಕ್ತವಾಗಿದೆ.
ಚಿಕ್ಕಮಗಳೂರು-ಶಿವಮೊಗ್ಗ-ಉಡುಪಿ-ಮಂಗಳೂರು ಜಿಲ್ಲೆ ಗಡಿ ಹಂಚಿಕೊಂಡಿರೋ ಕುದುರೆಮುಖವಾಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು