ಇತ್ತೀಚಿನ ಸುದ್ದಿ
ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ ನಾಳೆ ರಜೆ
16/07/2025, 20:43

ಮಡಿಕೇರಿ(reporterkarnataka.com): ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯ ಹಿನ್ನೆಲೆಯಲ್ಲಿ ನಾಳೆ ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಸುರಿಯುತ್ತಿರುವ ಹಿನ್ನೆಲೆ ನಾಳೆ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜ ಆದೇಶಿಸಿದ್ದಾರೆ.