ಇತ್ತೀಚಿನ ಸುದ್ದಿ
ಕರಾವಳಿಗೆ ತಂಪೆರಚಿದ ವರ್ಷಧಾರೆ: ಮಂಗಳೂರಿನಲ್ಲಿ ಸಾಧಾರಣ ಮಳೆ; ಬೆಳ್ತಂಗಡಿಯಲ್ಲಿ ಆಲಿಕಲ್ಲು ಸುರಿಮಳೆ
12/03/2025, 23:38

ಸಾಂದರ್ಭಿಕ ಚಿತ್ರ
ಅನುಷ್ ಪಂಡಿತ್ ಮಂಗಳೂರು
info.reporterkarnataka@gmail.com
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆ ಬುಧವಾರ ಸಂಜೆ ಗುಡುಗು ಸಹಿತ ಸಾಧಾರಣ ಮಳೆಯಾಗಿದ್ದು, ಮಂಗಳೂರು ನಗರದಲ್ಲಿಯೂ ಮಳೆಯಾಗಿದೆ. ಬೆಳ್ತಂಗಡಿಯಲ್ಲಿ ಆಲಿಕಲ್ಲು ಮಳೆಯಾಗಿದೆ.
ದ.ಕ. ಜಿಲ್ಲೆಯ ಎಲ್ಲಾ ತಾಲೂಕಿನ ಬಹುತೇಕ ಕಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ.
ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ತಾಪಮಾನ ಹೆಚ್ಚುತ್ತಿದ್ದು, ತಾಪಮಾನ
40+ ಡಿಗ್ರಿ ದಾಖಲಾಗಿದೆ.ಬಿಸಿಲಿನ ಬೇಗೆಗೆ ಇಡೀ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದರು. ಮಂಗಳೂರಿನಲ್ಲಿ ಸಂಜೆ ವೇಳೆ ದಿಢೀರ್ ಮಳೆಯಾಗಿದ್ದು, ಇದರಿಂದ ಜನ ಫುಲ್ ಖುಷ್ ಆಗಿದ್ದಾರೆ.
ಕರ್ನಾಟಕದಲ್ಲಿ ತಾಪಮಾನ ಏರಿಕೆ ನಡುವೆಯೇ ಹವಾಮಾನ ಇಲಾಖೆಯ ಮಳೆಯ ಮುನ್ಸೂಚನೆ ನೀಡಿತ್ತು. ರಾಜ್ಯದ ಹಲವು ಭಾಗಗಳಲ್ಲಿ ಮಾರ್ಚ್ 14ರವರೆಗೆ ಸುಡುವ ಬೇಸಿಗೆಯಲ್ಲಿ ಮುಂಗಾರು ಪೂರ್ವ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.