6:27 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ: ಉಳ್ಳಾಲ ಬಳಿ ಗುಡ್ಡ ಕುಸಿದು ಬಾಲಕಿ ಬಲಿ; ಮಂಗಳೂರಿನಲ್ಲಿ ಮನೆಗಳಿಗೆ ನುಗ್ಗಿದ ನೀರು

30/05/2025, 14:34

ಮಂಗಳೂರು(reporterkarnataka.com): ಕರಾವಳಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಭಾರೀ ಗಾಳಿ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಪ್ರಾಣ ಹಾನಿಯುಂಟಾಗಿದ್ದು, ಸಾಕಷ್ಟು ಅನಾಹುತಗಳು ನಡೆದಿವೆ.



ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ಗುಡ್ಡೆ ಜರಿದು ಮನೆಯ ಗೋಡೆ ಮೇಲೆ ಬಿದ್ದ ಪರಿಣಾಮ
ಫಾತಿಮಾ ನಯೀಮ(10) ಎಂಬ ಬಾಲಕಿಯೊಬ್ಬಳು ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತ ಬಾಲಕಿಯನ್ನು ನೌಶಾದ್ ಅವರ ಪುತ್ರಿ ಎಂದು ಗುರುತಿಸಲಾಗಿದೆ. ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ ಮತ್ತು ತಡೆಗೋಡೆ ಜರಿದು ಬಿದ್ದಿದ್ದು, ಮನೆಯ ಕೊಠಡಿಯ ಕಿಟಕಿ ಬಾಲಕಿಯ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ.
ಮಂಗಳೂರು ನಗರದ ಹಲವೆಡೆ ನಡುರಾತ್ರಿ ಮನೆ, ಅಂಗಡಿಗಳಿಗೆ ನೀರು ನುಗ್ಗಿದೆ.
ಸ್ಮಾರ್ಟ್ ಸಿಟಿ ಮಂಗಳೂರಿನಲ್ಲಿ ಮಧ್ಯರಾತ್ರಿ ಸುರಿದ ಭಾರೀ ಮಳೆಗೆ ಮಿಷನ್ ಸ್ಟ್ರೀಟ್ ಮತ್ತು ರಾವ್ & ರಾವ್ ವೃತ್ತ, ಕೊಪ್ಪರ ಹಿತ್ಲು ಪ್ರದೇಶ ಜಲಾವೃತವಾಗಿವೆ. ಇಲ್ಲಿ ಮನೆ ಹಾಗೂ ಅಂಗಡಿಗಳಿಗೆ ನೀರು ನುಗ್ಗಿವೆ. ಕಾರ್ಮಿಕ ಮುಖಂಡ ಬಿ.ಕೆ. ಇಮ್ತಿಯಾಜ್ ನೇತೃತ್ವದಲ್ಲಿ ರಕ್ಷಣಾ
ಕಾರ್ಯಾಚರಣೆ ನಡೆದಿದೆ. ನಗರದ ಬಿಜೈ ಬಾಳಿಗಾ ಸ್ಟೋರ್ ಬಳಿ ಬೃಹತ್ ಮರವೊಂದು ರಸ್ತೆಗೆ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬಜಪೆ, ಕಟೀಲ್ ಕಡೆಯಿಂದ ಬರುವ ಎಲ್ಲ ವಾಹನಗಳು ಎ.ಜೆ. ಆಸ್ಪತ್ರೆಯಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಿ ಅಲ್ಲಿಂದ ಕೆಪಿಟಿಯ ಕೆಳರಸ್ತೆಯಾಗಿ ಸರ್ಕಿಟ್ ಹೌಸ್ ಎದುರುಗಡೆ ರಸ್ತೆಯಾಗಿ ಕೆಎಸ್ಸಾರ್ಟಿಸಿ ಮೂಲಕ ಸ್ಟೇಟ್ ಬ್ಯಾಂಕ್ ಸೇರಿವೆ. ದೇರೆಬೈಲ್ ಕೊಂಚಾಡಿ ಸಮೀಪದ ಮಾಲೆಮಾರ್, ನಾಗಕನ್ನಿಕಾ ದೇವಾಲಯದ ಬಳಿ ರಸ್ತೆಗೆ ನೀರು ನುಗ್ಗಿದೆ. ಹಲವು ಮನೆಯೊಳಗೂ ನೆರೆ ನೀರು ಪ್ರವೇಶಿಸಿದೆ. ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ನ ಗಿರಿನಗರ ಬಳಿ ಗುಡ್ಡ ಕುಸಿದು ಮನೆಯ ಕೌಂಪೌಂಡಿಗೆ ಬಿದ್ದ ಘಟನೆ ನಡೆದಿದೆ.‌ ಅತ್ತಾವರ ಕೆಎಂಸಿ, ಪಾಂಡೇಶ್ವರ, ಕೊಟ್ಟರಚೌಕಿ ಮುಂತಾದ ಪ್ರದೇಶದಲ್ಲಿಯೂ ನೆರೆ ನೀರು ನುಗ್ಗಿದೆ.
ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳು ಜಲಾವೃತಗೊಂಡಿವೆ. ಕುಂಪಲ, ಕಲ್ಲಾಪು, ಧರ್ಮ ನಗರ, ಉಚ್ಚಿಲ, ತಲಪಾಡಿ , ವಿದ್ಯಾನಗರ , ಕಲ್ಕಟ್ಟ ಮುಂತಾದ ಕಡೆ ಗಳಲ್ಲಿ ಹಲವು ಮನೆಗಳು ಜಲಾವೃತಗೊಂಡಿದ್ದು ಮನೆಯೊಳಗೆ ನೀರು ನುಗ್ಗಿದೆ. ಬಹಳಷ್ಟು ಕುಟುಂಬಗಳು ರಾತ್ರಿ ವೇಳೆ ಬೇರೆಡೆ ಸ್ಥಳಾಂತರ ಗೊಂಡಿದೆ. ಕಲ್ಲಾಪುವಿನಲ್ಲಿ 75 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿವೆ. ತಲಪಾಡಿಯಲ್ಲಿ ಒಂದು ಮನೆಗೆ ನೀರು ನುಗ್ಗಿ ಹಾನಿಯಾಗಿದೆ. ಈ ಕುಟುಂಬ ವನ್ನು ರಾತ್ರಿ ವೇಳೆ ಸ್ಥಳಾಂತರ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು, ಕಂದಾಯ ನಿರೀಕ್ಷಕ ಪ್ರಮೋದ್, ಸೋಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಮತ್ತಡಿ, ಗ್ರಾಮಕರಣಿಕ ಸುರೇಶ್ ಮತ್ತಿತರರು ರಾತ್ರಿ ವೇಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಬಂಟ್ವಾಳ ತಾಲೂಕಿನಲ್ಲೂ ಮಳೆಯಿಂದ ಸಾಕಷ್ಟು ಹಾನಿಯುಂಟಾಗಿದೆ. ಮೊಂಟೆ ಪದವು ನಲ್ಲಿ ಗುಡ್ಡ ಜರಿದು ಮೂವರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು