7:15 PM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ ಸಂಗಮದ ಉದ್ಯಾನವನ ಜಲಾವೃತ

27/07/2025, 14:41

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಳೆದೆರಡು ದಿನಗಳಿಂದ ನಿರಂತರವಾಗಿ ಉಂಟಾಗಿರುವ ಗಾಳಿ ಮಳೆಗೆ ಕೊಡಗು ಜಿಲ್ಲೆಯ ನದಿ ತೊರೆಗಳು ಉಕ್ಕಿ ಹರಿಯುತ್ತಿದ್ದು ಅಪಾಯದ ಮಟ್ಟ ತಲುಪಿದೆ. ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಹನ್ನೆರಡು ಗಂಟೆಗಳ ಅವಧಿಯಲ್ಲಿ 180 ಮಿಲಿಮೀಟರ್ ನಷ್ಟು ಮಳೆ ದಾಖಲಾಗಿದೆ. ಭಾಗಮಂಡಲದ ಕಾವೇರಿ, ಕನ್ನಿಕೆ ಮತ್ತು ಸುಜ್ಜ್ಯತಿ ನದಿಗಳು ಭರ್ತಿಯಾಗಿ ತ್ರಿವೇಣಿ ಸಂಗಮ ಮತ್ತು ಉದ್ಯಾನವನ ಜಲಾವೃತ ಗೊಂಡಿದೆ. ಬಲಮುರಿ, ಬೇತ್ರಿ ಸೇತುವೆ ಮಟ್ಟಕ್ಕೆ ನೀರು ಹರಿಯುತ್ತಿದೆ, ನಾಪೋಕ್ಲು ಬಳಿ ನದಿ ನೀರು ರಸ್ತೆ, ತೋಟಗಳಿಗೆ ಆವರಿಸಿದೆ.


ಕರಡಿಗೋಡು ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿ ಸ್ಥಳೀಯರನ್ನು ಸುರಕ್ಷಿತವಾಗಿ ಕಾಳಜಿ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಇತ್ತ ಕುಶಾಲನಗರ ಪಟ್ಟಣದ ನದಿ ಪಾತ್ರದಲ್ಲಿ ಅಪಾಯದ ಮುನ್ಸೂಚನೆ ನೀಡಿದೆ. ಹಾರಂಗಿ ಜಲಾಶಯ ದಿಂದ 25 ಸಾವಿರ ಕ್ಯೂಸಕ್ಸ್ ನೀರು ನದಿಗೆ ಹೊರ ಬಿಡಲಾಗಿರುವುದರಿಂದ ಕೂಡಿಗೆ ಹಾಗೂ ಕಣಿವೆ ತೂಗು ಸೇತುವೆ ಮುಟ್ಟುವ ಸ್ಥಿತಿಗೆ ತಲುಪಿದೆ. ಸೋಮವಾರಪೇಟೆ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಮುಕ್ಕೋದ್ಲು,ಹಟ್ಟಿ ಹೊಲೆ, ಮಾದಾಪುರ ಹೊಳೆ, ಹರದೂರು ಹೊಳೆ ಭಾಗದಿಂದ ನೀರು ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿದೆ. ದಕ್ಷಿಣ ಕೊಡಗಿನ ಭಾಗದ ಲಕ್ಷ್ಮಣ ತೀರ್ಥ ನದಿಯಲ್ಲಿ ಪ್ರವಾಹ ಹೆಚ್ಚಾಗಿದ್ದು ಭತ್ತದ ಗದ್ದೆ ಅಡಿಕೆ ತೋಟಗಳಿಗೆ ನೀರು ನುಗ್ಗಿದೆ, ಬಿರುನಾಣಿ, ಕಾನೂರು, ಭಾಗದಲ್ಲಿ ಸಣ್ಣ ಪುಟ್ಟ ತೊರೆಗಳು ನದಿ ಸ್ವರೋಪ ಪಡೆದುಕೊಂಡು ಹರಿಯುತ್ತಿದ್ದು ಕೆಲವೆಡೆ ಸಂಪರ್ಕ ಸೇತುವೆ ಕುಸಿಯುವ ಭೀತಿ ಎದುರಿಸುತ್ತಿದಲ್ಲದೆ ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು