ಇತ್ತೀಚಿನ ಸುದ್ದಿ
ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ
17/08/2025, 19:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಅವ್ಯಾಹತವಾಗಿ ಭಾರೀ ಮಳೆಯಾಗುತ್ತಿದ್ದು, ಮಲೆನಾಡು ಭಾಗದ ಶಾಲೆಗಳಿಗೆ ನಾಳೆ(ಆ.18)ರಜೆ ಸಾರಲಾಗಿದೆ.
ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆ
ಮುಂದುವರಿದಿದ್ದು,ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಸಾರಲಾಗಿದೆ.
ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್ ಆರ್.ಪುರ, ಕಳಸ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು, ವಸ್ತಾರೆ, ಖಾಂಡ್ಯ, ಆವತಿ, ಜಾಗರ ಹೋಬಳಿಗಳಿಗೆ ಕೂಡ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಣೆಯಾಗಿತ್ತು.
ಶೃಂಗೇರಿಯಲ್ಲಿ ಮಳೆ ಅಬ್ಬರಕ್ಕೆ ಕಾರುಗಳು ಜಲಾವೃತವಾಗಿದೆ.
ಭಾರೀ ಮಳೆಗೆ ಗಾಂಧಿ ಮೈದಾನ ಸಂಪೂರ್ಣ ಜಲಾವೃತಗೊಂಡಿದೆ.
ಶೃಂಗೇರಿ ದೇಗುಲದ ಪಾರ್ಕಿಂಗ್ ಪ್ರದೇಶವಾದ ಗಾಂಧಿ ಮೈದಾನದಲ್ಲಿದ್ದ ಕಾರುಗಳು ಜಲಾವೃತಗೊಂಡಿದೆ. ತುಂಗಾ ನದಿ ಅಬ್ಬರಕ್ಕೆ ಹೊಲ-ಗದ್ದೆ-ತೋಟಗಳಿಗೆ ನೀರು ನುಗ್ಗಿದೆ. ಮಹಾಮಳೆಗೆ ಮಲೆನಾಡು ಅಕ್ಷರಶಃ ಕಂಗಾಲಾಗಿದೆ.