6:54 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ

17/08/2025, 19:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಅವ್ಯಾಹತವಾಗಿ ಭಾರೀ ಮಳೆಯಾಗುತ್ತಿದ್ದು, ಮಲೆನಾಡು ಭಾಗದ ಶಾಲೆಗಳಿಗೆ ನಾಳೆ(ಆ.18)ರಜೆ ಸಾರಲಾಗಿದೆ.
ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆ
ಮುಂದುವರಿದಿದ್ದು,ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಸಾರಲಾಗಿದೆ.


ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್ ಆರ್.ಪುರ, ಕಳಸ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು, ವಸ್ತಾರೆ, ಖಾಂಡ್ಯ, ಆವತಿ, ಜಾಗರ ಹೋಬಳಿಗಳಿಗೆ ಕೂಡ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಣೆ‌ಯಾಗಿತ್ತು‌.
ಶೃಂಗೇರಿಯಲ್ಲಿ ಮಳೆ ಅಬ್ಬರಕ್ಕೆ ಕಾರುಗಳು ಜಲಾವೃತವಾಗಿದೆ.
ಭಾರೀ ಮಳೆಗೆ ಗಾಂಧಿ ಮೈದಾನ ಸಂಪೂರ್ಣ ಜಲಾವೃತಗೊಂಡಿದೆ.
ಶೃಂಗೇರಿ ದೇಗುಲದ ಪಾರ್ಕಿಂಗ್ ಪ್ರದೇಶವಾದ ಗಾಂಧಿ ಮೈದಾನದಲ್ಲಿದ್ದ ಕಾರುಗಳು ಜಲಾವೃತಗೊಂಡಿದೆ. ತುಂಗಾ ನದಿ ಅಬ್ಬರಕ್ಕೆ ಹೊಲ-ಗದ್ದೆ-ತೋಟಗಳಿಗೆ ನೀರು ನುಗ್ಗಿದೆ. ಮಹಾಮಳೆಗೆ ಮಲೆನಾಡು ಅಕ್ಷರಶಃ ಕಂಗಾಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು