ಇತ್ತೀಚಿನ ಸುದ್ದಿ
ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ ರಜೆ
17/07/2025, 19:07

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ನಿರಂತರ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಜುಲೈ 18 ಶುಕ್ರವಾರ ಬೆಳಿಗ್ಗೆವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಬಿರುಸುಗೊಂಡಿದ್ದು,ಇನ್ನು ಮಳೆ ಪ್ರಮಾಣ ಹೆಚ್ಚಾಗುವ ಹಿನ್ನಲೆಯಲ್ಲಿ ನಾಳೆ ಸಹ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಮುಂದುವರೆಸುವಂತೆ ಜಿಲ್ಲಾಧಿಕಾರಿ ವೆಂಕಟರಾಜ ಅದೇಶಿಸಿದ್ದಾರೆ.