11:53 PM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಮಹಾಮಳೆಗೆ ಮಂಗಳೂರು ತತ್ತರ: ಜನಜೀವನ ಅಸ್ತವ್ಯಸ್ತ; 12 ಕುಟುಂಬಗಳ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರ

15/06/2025, 12:19

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಮಂಗಳೂರಿನಲ್ಲಿ ಸಾಕಷ್ಟು ಹಾನಿಯಾಗಿದ್ದು, ತಗ್ಗು ಪ್ರದೇಶ ಜಲಾವೃತಗೊಂಡಿದೆ. ನಗರದ ಅತ್ತಾವರ ಸೇರಿದಂತೆ ವಿವಿಧ ಕಡೆಗಳಿಂದ 12 ಕುಟುಂಬಗಳನ್ನು ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.


ಮಹಾಮಳೆಗೆ ಮಂಗಳೂರಿನ ಗೇಟ್ ವೇ ಎಂದೇ ಕರೆಯಲ್ಪಡುವ ಪಂಪ್ ವೆಲ್ ಸಂಪೂರ್ಣ ಜಲಾವೃತವಾಗಿದೆ. ಕೊಟ್ಟಾರ ಚೌಕಿ, ಮಾಲೆಮಾರ್, ಅತ್ತಾವರ, ಪಾಂಡೇಶ್ವರ, ಎಕ್ಕಾರು ಮುಂತಾದ ಕಡೆಗಳ ತಗ್ಗು ಪ್ರದೇಶ ಜಲಾವೃತವಾಗಿದೆ.
ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಎಲ್ಲಾ ತಹಶೀಲ್ದಾರರು ಹಾಗೂ ಇನ್ಸಿಡೆಂಟ್ ಕಮಾಂಡರ್ ಗಳು ಅಪಾಯದಂಚಿನಲ್ಲಿರುವ ಮನೆಗಳ ಕುಟುಂಬಗಳನ್ನು ಕಾಳಜಿ ಕೇಂದ್ರ /ಸುರಕ್ಷಿತ ಸ್ಥಳಗಳಿಗೆ ಕೂಡಲೇ ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ.
ನೆರೆ ಉಂಟಾಗುವ ಪ್ರದೇಶಗಳ ಮೇಲೆ ತೀರಾ ನಿಗಾ ವಹಿಸಿ ಎಲ್ಲಾ ರಕ್ಷಣಾ ಸಾಮಾಗ್ರಿಗಳನ್ನು ಸನ್ನದ್ಧವಾಗಿರಿಸಬೇಕು. ಯಾವುದೇ ಸಾವು ನೋವು ಸಂಭವಿಸದಂತೆ ಎಚ್ಚರಿಕೆಯನ್ನು ವಹಿಸಬೇಕು. ಎಲ್ಲಾ ತಾಲೂಕು ಹಾಗೂ ಮಹಾನಗರಪಾಲಿಕೆ ಕಂಟ್ರೋಲ್‌ ರೂಂ ನಿರಂತರ ಕಾರ್ಯಾಚರಣೆಯಲ್ಲಿರಬೇಕು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಪ್ರಾಕೃತಿಕ ವಿಕೋಪ ಕಾರ್ಯಾಚರಣೆಯಲ್ಲಿ ಯಾವುದೇ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

*ಜಿಲ್ಲಾಧಿಕಾರಿ ಭೇಟಿ*
ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮತ್ತು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಅವರು ಶನಿವಾರ ನಗರದಲ್ಲಿ ಮಳೆ ನೀರು ನಿಂತು ಸಮಸ್ಯೆಗೀಡಾದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಪಂಪ್ ವೆಲ್ ಗೆ ಭೇಟಿ ನೀಡಿ, ಮಳೆ ನೀರು ಸರಾಗ ಹರಿವಿನ ಸಮಸ್ಯೆಗಳ ಬಗ್ಗೆ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.

*12 ಕುಟುಂಬಗಳು ಪುನರ್ವಸತಿ ಕೇಂದ್ರಕ್ಕೆ*
ಮಂಗಳೂರು‌ ನಗರದ ಅತ್ತಾವರ ಸೇರಿದಂತೆ ಕೇಂದ್ರ ಭಾಗದ ವಿವಿಧೆಡೆ ಮಳೆ ನೀರು ಮನೆಗಳಿಗೆ ನುಗ್ಗಿ ತೊಂದರೆಗೀಡಾದ 12 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಇವರಿಗೆ ಮಹಾನಗರಪಾಲಿಕೆ ವತಿಯಿಂದ ಪುರಭವನ ಆವರಣದಲ್ಲಿ ತಾತ್ಕಾಲಿಕ ಪುನರ್ವಸತಿ‌ ಕೇಂದ್ರದಲ್ಲಿ ಆಶ್ರಯ ನೀಡಿ‌, ಆಹಾರ ಮತ್ತು ಅಗತ್ಯ ಸಾಮಾಗ್ರಿಗಳನ್ನು ಒದಗಿಸಲಾಗಿದೆ. ನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಅವರು ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು