8:11 PM Saturday31 - January 2026
ಬ್ರೇಕಿಂಗ್ ನ್ಯೂಸ್
ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ

ಇತ್ತೀಚಿನ ಸುದ್ದಿ

ಹೆಬಿಕ್ ತಾಂತ್ರಿಕ ತರಬೇತಿ ಸಂಸ್ಥೆ: 4 ಸೀಟುಗಳು ಲಭ್ಯ; ಅರ್ಜಿ ಆಹ್ವಾನ

06/09/2024, 20:21

ಮಂಗಳೂರು(reporterkarnataka.com): ಸುಮಾರು 60 ವರ್ಷಗಳ ಅರ್ಥಪೂರ್ಣ ಅಸ್ತಿತ್ವವನ್ನು ಹೊಂದಿರುವ ಹೆಬಿಕ್ ತಾಂತ್ರಿಕ ತರಬೇತಿ ಸಂಸ್ಥೆಯು(ಎಚ್ ಟಿಟಿಐ)ಐಟಿಐ 2024ರ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕೇವಲ 4 ಸೀಟುಗಳು ಲಭ್ಯವಿದೆ.


ಎಸ್ಸೆಸ್ಸೆಲ್ಸಿ(ಉತ್ತೀರ್ಣ) ಅಥವಾ ಪಿಯುಸಿ ಉತ್ತೀರ್ಣ/ ಅನುತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಹೆಬಿಕ್ ತಾಂತ್ರಿಕ ತರಬೇತಿ ಸಂಸ್ಥೆಯು ಗುಣಮಟ್ಟದ ತಾಂತ್ರಿಕ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ. ಇದು ಬ್ಲೂ ಕಾಲರ್ ಎಂಜಿನಿಯರಿಂಗ್ ಸಂಸ್ಥೆಯೆಂದೇ ಖ್ಯಾತಿ ಪಡೆದಿದೆ. ಅತ್ಯಾಧುನಿಕ ಮೂಲಸೌಕರ್ಯವಿರುವ ತರಬೇತಿ ಸಂಸ್ಥೆಯಲ್ಲಿ ಅನುಭವಿ ಗುಣಮಟ್ಟದ ಅಧ್ಯಾಪಕ ವೃಂದವಿದೆ. ಇಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ 100% ಉದ್ಯೋಗ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಹೆಬಿಕ್ ತಾಂತ್ರಿಕ ತರಬೇತಿ ಸಂಸ್ಥೆ, ಬಲ್ಮಠ, ಮಂಗಳೂರು- 575001, ದೂರವಾಣಿ ಸಂಖ್ಯೆ 0824- 2422036/2985578, ಮೊಬೈಲ್: 9972007578 ಸಂಪರ್ಕಿಸಲು ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು