ಇತ್ತೀಚಿನ ಸುದ್ದಿ
ಹೆಬ್ರಿ: ಡಿ.31ರಂದು ಅರಣ್ಯ ಇಲಾಖೆಯಿಂದ ಸಾರ್ವಜನಿಕ ಅಹವಾಲು ಸಭೆ
20/12/2022, 02:59

ಸಾಂದರ್ಭಿಕ ಚಿತ್ರ
ಕಾರ್ಕಳ(reporterkarnataka.com): ಹೆಬ್ರಿ-ಪರ್ಕಳ ರಾಷ್ಟಿಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ, ಕಾಮಗಾರಿಗೆ ಅಡಚಣೆಯಾಗುವ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಳುಗುಡ್ಡೆಯಿಂದ ತಾಣದಮನೆವರೆಗೆ ಇರುವ ಒಟ್ಟು 1549 ವಿವಿಧ ಜಾತಿಯ ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಡಿಸೆಂಬರ್ 31 ರಂದು ಮಧ್ಯಾಹ್ನ 3 ಗಂಟೆಗೆ ಹೆಬ್ರಿ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ.
ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ kpurforest@yahoo.com ನಲ್ಲಿಯೂ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.