7:37 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಹೆಬ್ರಿ ಹೋಬಳಿ ರಚನೆಗೆ ಸಚಿವ ಸಂಪುಟ ಅನುಮೋದನೆ: ಸಚಿವ ವಿ. ಸುನಿಲ್ ಕುಮಾರ್

05/10/2021, 19:08

ಕಾರ್ಕಳ(reporterkarnataka.com) : ಹೆಬ್ರಿ ತಾಲೂಕು ಕಾರ್ಕಳ ತಾಲೂಕಿನಿಂದ ಬೇರ್ಪಟ್ಟು ಪೂರ್ಣ ಪ್ರಮಾಣದ ತಾಲೂಕಾಗಿ ಘೋಷಣೆ ಆಗಿ ವರ್ಷಗಳಾದರೂ ಇಷ್ಟರವರೆಗೆ ಹೋಬಳಿ ಘೋಷಣೆ ಆಗದೇ ಇರುವುದರಿಂದ ಹಲವಾರು ಆಡಳಿತಾತ್ಮಕ ಸಮಸ್ಯೆಗಳು ತಲೆದೋರುತ್ತಿದ್ದು ಈ ನಿಟ್ಟಿನಲ್ಲ ಸಚಿವ ಸುನಿಲ್ ಕುಮಾರ್ ಹೆಬ್ರಿ ಹೋಬಳಿ ರಚನೆ ಮಾಡುವ ಬಗ್ಗೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಆಗಿರುತ್ತದೆ. 

ಹೆಬ್ರಿ ತಾಲೂಕು ರಚನೆಗೊಂಡು ತಾಲೂಕು ಕಚೇರಿ ಆರಂಭ ಆಗಿದ್ದರೂ ತಾಲೂಕಿನ ಹೆಚ್ಚಿನ ಗ್ರಾಮಗಳು ಅಜೆಕಾರು ಹೋಬಳಿಗೆ ಒಳಗೊಂಡಿತ್ತು. ಹಾಗೂ ಹೆಬ್ರಿ ತಾಲೂಕಿನ ಸಾರ್ವಜನಿಕರು ಕಂದಾಯ ಇಲಾಖೆಯ ಸೇವೆ ಪಡೆಯಲು ಅಜೆಕಾರು ನಾಡ ಕಚೇರಿಗೆ ಬಂದು ಅರ್ಜಿ ಸಲ್ಲಿಸಬೇಕಾಗಿತ್ತು.  ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿತ್ತು ಮತ್ತು ಎರಡೂ ಕಡೆ ಒಬ್ಬರೇ ಕಂದಾಯ ನಿರೀಕ್ಷಕರು ಕರ್ತವ್ಯ ನಿರ್ವಹಿಸಬೇಕಾಗಿತ್ತು. 

ಈ ಎಲ್ಲ ಸಮಸ್ಯೆಗಳನ್ನು ಮನಗಂಡು ಮಾನ್ಯ ಸಚಿವ ವಿ. ಸುನಿಲ್ ಕುಮಾರ್  ಅವರು ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಮನವಿ ಮಾಡಿಕೊಂಡ ಮೇರೆಗೆ ಇಂದು ನಡೆದ ಸಚಿವ ಸಂಪುಟ ಸಭೆಗೆ ಅನುಮೋದನೆಗಾಗಿ ಕಡತ ಹಾಜರುಪಡಿಸಿದ್ದರು.

ಹೋಬಳಿ ರಚನೆ ಬಗ್ಗೆ ಶೀಘ್ರ ಸರ್ಕಾರಿ ಆದೇಶ ಜಾರಿ ಆಗಲಿದ್ದು ತದನಂತರ ಹೆಬ್ರಿ ತಾಲೂಕು ಕೇಂದ್ರದಲ್ಲಿಯೇ ಕಂದಾಯ ಸೇವೆಗಳು ಆರಂಭವಾಗಲಿದ್ದು, ಹೆಬ್ರಿ ಕೇಂದ್ರ ಸ್ಥಾನಕ್ಕೆ ಓರ್ವ ಕಂದಾಯ ನಿರೀಕ್ಷಕರು ಹಾಗೂ ಇನ್ನಿತರ ಹುದ್ದೆಗಳು ಸೃಷ್ಠಿಯಾಗಲಿದೆ. ಇದರಿಂದ ತಾಲೂಕಿನ ಸಾರ್ವಜನಿಕರಿಗೆ ತ್ವರಿತವಾಗಿ ಮತ್ತು ನಿಗದಿತ ಕಾಲಮಿತಿಯಲ್ಲಿ ಸೇವೆಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ಸಚಿವರ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು