3:21 AM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಹೆಬ್ರಿ: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದತ್ತಿ ಉಪನ್ಯಾಸ ಹಾಗೂ ಓದುವ ಬೆಳಕು ಕಾರ್ಯಕ್ರಮ

20/11/2023, 10:07

ಹೆಬ್ರಿ(reporterkarnataka.com): ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹೆಬ್ರಿ ತಾಲೂಕು ಘಟಕ ಮತ್ತು ಹೆಬ್ರಿ ಗ್ರಾಮ ಪಂಚಾಯತ್ ಗ್ರಂಥಾಲಯ ಅರಿವು ಕೇಂದ್ರದ ಸಹಯೋಗದೊಂದಿಗೆ ದತ್ತಿ ಉಪನ್ಯಾಸ ಹಾಗೂ ಓದುವ ಬೆಳಕು ಕಾರ್ಯಕ್ರಮ ಜರುಗಿತು.
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾದ ತಿಂಗಳ ಸಡಗರ ಕಾರ್ಯಕ್ರಮದಲ್ಲಿ ಅಂಬಲಪಾಡಿ ಜಾನಕಿ ವ್ಯಾಸ ಬಲ್ಲಾಳ ದತ್ತಿ ಹಾಗೂ ಶ್ರೀ ಸದಾನಂದ ಸುವರ್ಣ ದತ್ತಿ ಉಪನ್ಯಾಸವು ಅ.ಪೊಳಲಿ ಬಾಲಕೃಷ್ಣ ಶೆಟ್ಟಿ ಮತ್ತು ಡಾ.ಶಿವರಾಮ ಕಾರಂತ ಬದುಕು ಮತ್ತು ಬರೆಹ ಎಂಬ ಎರಡು ದತ್ತಿ ಉಪನ್ಯಾಸಗಳನ್ನು ಹಮ್ಮಿಕೊಳ್ಳಲಾಗಿತ್ತು.
ಹೆಬ್ರಿ ಅಮೃತ ಭಾರತಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕರಾದ
ಮಹೇಶ್ ಹೈಕಾಡಿ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಿದರು.
ಗ್ರಾಮ ಪಂಚಾಯತ್ ಗ್ರಂಥಾಲಯದ ಅರಿವು ಕೇಂದ್ರದ ವತಿಯಿಂದ ನಡೆಸಲಾದ ಓದುವ ಬೆಳಕು ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ತಾವು ಓದಿದ ಮೆಚ್ಚಿನ ಪುಸ್ತಕದ ಕುರಿತು ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಹೆಬ್ರಿ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀನಿವಾಸ ಭಂಡಾರಿ ಮುದ್ದೂರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಗ್ರಂಥಾಲಯದ ಸಹಯೋಗದೊಂದಿಗೆ ನಡೆಸಲಾದ ಈ ಕಾರ್ಯಕ್ರಮದಿಂದ ಪರಿಷತ್ತಿನ ಉದ್ದೇಶ ನೆರವೇರಿದೆ. ವಿದ್ಯಾರ್ಥಿಗಳಲ್ಲಿ ಓದಿನ ಅಭಿರುಚಿಯನ್ನು ಬೆಳೆಸುವ ಇಂತಹ ಕಾರ್ಯಕ್ರಮ ತುಂಬಾ ಸೂಕ್ತವಾದದ್ದು ಎಂದು ಹೇಳಿದರು.
ವೇದಿಕೆಯಲ್ಲಿ ಹೆಬ್ರಿ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಅಶೋಕ್, ಹೆಬ್ರಿ ಗ್ರಾಮ ಪಂಚಾಯಿತಿ ಸದಸ್ಯರಾದ ಎಚ್.ಜನಾರ್ದನ್, ಶಿಕ್ಷಣ ಪೌಂಡೇಶನ್ ನ ತಾಲೂಕು ಸಂಯೋಜಕರಾದ ವಿಜಯಲಕ್ಷ್ಮಿ, ಹಾಗೂ ಶಿಕ್ಷಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾದ ಹರಿಕಿರಣ್ ಉಪಸ್ಥಿತರಿದ್ದರು.
ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ತಾಲೂಕು ಘಟಕದ ಗೌರವ ಕಾರ್ಯದರ್ಶಿಗಳಾದ ಡಾ. ಪ್ರವೀಣ ಕುಮಾರ್ ಎಸ್ ಅವರು ಉಪನ್ಯಾಸದ ಕುರಿತು ಪ್ರತಿಸ್ಪಂದನ ಮಾತುಗಳನ್ನಾಡಿದರು.
ಗ್ರಂಥಪಾಲಕರಾದ ಪುಷ್ಪಾವತಿ ಶೆಟ್ಟಿ ಅವರು ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ
ಮಂಜುನಾಥ ಕೆ. ಶಿವಪುರ ಕಾರ್ಯಕ್ರಮವನ್ನು ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ಪ್ರಿತೇಶ್ ಶೆಟ್ಟಿ ವಂದಿಸಿದರು.
ಕಾರ್ಯಕ್ರಮದಲ್ಲಿ ಕ.ಸಾ.ಪ ಪದಾಧಿಕಾರಿಗಳು, ಗ್ರಂಥಾಲಯ ಓದುಗರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು