ಇತ್ತೀಚಿನ ಸುದ್ದಿ
ಹೆಚ್ಚುತಿರುವ ಕೊರೋನಾ ಹಿನ್ನೆಲೆ :ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ
04/05/2021, 15:51
ಬೆಂಗಳೂರು(Reporter Karnataka News) ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ನಿಗದಿಯಂತೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದೂಡಲಾಗಿದ್ದು, ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ನೇರವಾಗಿ ಉತ್ತೀರ್ಣ ಮಾಡಲಾಗುವುದು. ಕೋವಿಡ್-19 ಪ್ರಕರಣ ಹೆಚ್ಚಳದಿಂದಾಗಿ ಎಲ್ಲ ಶಿಕ್ಷಕರು ಮನೆಯಿಂದ ಕೆಲಸ ಮಾಡಬೇಕೆ ಎಂದು ತಿಳಿಸಿದ್ದಾರೆ.
ಈಗಾಗಲೇ ಶಿಕ್ಷಣ ಇಲಾಖೆ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸಲು ತಯಾರಿ ಮಾಡಿಕೊಳ್ಳಲಾಗುತ್ತಿತ್ತು. ಆದರೆ, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡುವ ಬಗ್ಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹಾಗೂ ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯ ಅಧಿಕಾರಿಗಳ ಜತೆ ಇಂದು ಸಭೆ ಕರೆದಿದ್ದರು.