5:17 PM Sunday20 - July 2025
ಬ್ರೇಕಿಂಗ್ ನ್ಯೂಸ್
SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ…

ಇತ್ತೀಚಿನ ಸುದ್ದಿ

ಹೆದ್ದಾರಿ ದುರಸ್ತಿ ಮಾಡಬೇಕಾದ ಸಂಸದೆ ಶೋಭಾ ಕರಂದ್ಲಾಜೆ ಅಡಗಿ ಕುಳಿತಿದ್ದಾರೆ: ಮಾಜಿ ಸಚಿವ ಸೊರಕೆ ಟೀಕೆ

22/09/2022, 21:57

ಉಡುಪಿ(reporterkarnataka.com):
ಜಿಲ್ಲೆಯಲ್ಲಿ ರಸ್ತೆಯ ದುರಾವಸ್ಥೆಯಿಂದ ಜನರು ಪ್ರಾಣ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣ ಆಗಿದೆ. ಆದರೆ, ಹೆದ್ದಾರಿಯನ್ನು ದುರಸ್ತಿ ಮಾಡಬೇಕಾದ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಅಡಗಿ ಕುಳಿತಿದ್ದಾರೆ. ನಮ್ಮ ಸಂಸದೆಯನ್ನು ಹುಡುಕಿಕೊಡಿಯೆಂದು ಪೊಲೀಸ್ ಠಾಣೆಗೆ ದೂರು ನೀಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಟೀಕಿಸಿದರು.

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೊಳಿಸುವಂತೆ ಆಗ್ರಹಿಸಿ ಹಾಗೂ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ನೇತೃತ್ವದಲ್ಲಿ ನಗರದಲ್ಲಿ ಇಂದು ಹಮ್ಮಿಕೊಳ್ಳಲಾದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು. 

ನಮ್ಮ ಸಂಸದೆಗೆ ಸತ್ತವರ ಧರ್ಮ ನೋಡಿ ರಾಜಕೀಯ ಮಾಡುವುದು ಬಿಟ್ಟರೆ, ಜನರ ಸಮಸ್ಯೆ ಆಲಿಸುವ ಸೌಜನ್ಯ ಕೂಡ ಇಲ್ಲ‌. ನಾವು ಏನು ಅನ್ಯಾಯ ಮಾಡಿದ್ದೇವೆ. ನಾವೇನಾದರೂ ಪಾಕಿಸ್ತಾನದಲ್ಲಿ ಇದ್ದೇವಾ ಎಂದು ಪ್ರಶ್ನಿಸಿದರು.

40% ಕಮಿಷನ್, 70% ಬೆಲೆ ಏರಿಕೆ, ನಿರುದ್ಯೋಗ ಬಿಜೆಪಿ ಸರ್ಕಾರದ ಕೊಡುಗೆ. ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯಾತೀತತೆಯನ್ನು ಕಿತ್ತು ಹಾಕುವ ಹುನ್ನಾರ ದೇಶಾದ್ಯಂತ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಉತ್ತರ ವಲಯದ ಅಧ್ಯಕ್ಷ ಸಂತೋಷ್ ಕುಲಾಲ್ ಪಕ್ಕಾಲು, ಮುಖಂಡರಾದ ಚರಣ್ ವಿಠ್ಠಲ್ ಕುದಿ, ಇಸ್ಮಾಯಿಲ್ ಆತ್ರಾಡಿ, ಶಶಿಧರ್ ಜತನ್ನ, ಉಮೇಶ್ ಕಾಂಚನ್, ಲಕ್ಷ್ಮೀ ನಾರಾಯಣ ಪ್ರಭು, ಗುರುದಾಸ್ ಭಂಡಾರಿ, ದಿಲೀಪ್ ಹೆಗ್ಡೆ, ಕಿರಣ್ ಹೆಗ್ಡೆ, ಸಂತೋಷ್ ಶೆಟ್ಟಿ, ಸೌರಭ್ ಭಲ್ಲಾಳ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು