12:16 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಹೆದ್ದಾರಿ ಕಾಮಗಾರಿ: ಆರೆಸ್ಸೆಸ್ ಮುಖಂಡ ಡಾ. ಪ್ರಭಾಕರ್ ಭಟ್ ಮನೆಯ ಆವರಣ ಗೋಡೆ ಕುಸಿತ; ವಾಹನ ಜಖಂ

28/01/2022, 14:20

ಬಂಟ್ವಾಳ(reporterkarnataka.com): ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ ನಾಯಕ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದ್ದು, ದ್ವಿಚಕ್ರ ವಾಹನ ಕೂಡ ಜಖಂ ಆಗಿದೆ.

ಗುರುವಾರ ರಾತ್ರಿ ವೇಳೆ ಈ ಘಟನೆ ನಡೆದಿದೆ. ಗೋಡೆ ಬಿದ್ದ ವೇಳೆ ಸ್ಥಳದಲ್ಲಿದ್ದ ದ್ವಿಚಕ್ರ ವಾಹನವೊಂದು ಜಖಂ ಆಗಿದೆ.

ಈ ನಡುವೆ ಹೆದ್ದಾರಿಯ ಚತುಷ್ಪಥ ರಸ್ತೆ ಅಗಲೀಕರಣ ಕಾಮಗಾರಿಗಾಗಿ ಕಲ್ಲಡ್ಕ ಪೇಟೆಯಲ್ಲಿ ಎಷ್ಟು ಮೀಟರ್ ರಸ್ತೆ ಅಗಲೀಕರಣಗೊಳ್ಳುತ್ತದೆ ಎಂಬುದರ ಸ್ಪಷ್ಟವಾದ ಲೆಕ್ಕ ನೀಡದೆ ಜನ ಗೊಂದಲಕ್ಕೀಡಾಗಿದ್ದಾರೆ.

ಕಲ್ಲಡ್ಕ ಪೇಟೆಯಲ್ಲಿ ಫ್ಲೈಓವರ್ ನಿರ್ಮಾಣದ ಪ್ಲಾನ್ ತಯಾರಿಸಿದ ಬಳಿಕ ರಸ್ತೆಯ ಇಕ್ಕೆಲಗಳು ಬಾಕಿ ಉಳಿದ ಕಡೆಗಳಿಗಿಂತ ಕಡಿಮೆ ಜಾಗ ಸ್ವಾಧೀನ
ಮಾಡುತ್ತಾರೆ ಎಂಬ ಮಾಹಿತಿ ಇದೆ.

ಫ್ಲೈ ಓವರ್ ನ ಎರಡು ಬದಿಗಳಲ್ಲಿ ಸರ್ವೀಸ್ ರಸ್ತೆ ನಿರ್ಮಾಣಗೊಳ್ಳುತ್ತದೆ. ಈಗಾಗಿ ರಸ್ತೆ ಅಗಲೀಕರಣ ದ ಸರಿಯಾದ ಸರ್ವೆ ಕಾರ್ಯ ಇನ್ನೂ

ಮುಗಿದಿಲ್ಲ ಎಂಬುದು ಸ್ಥಳೀಯರ ಮಾತು. ಹಾಗಾಗಿ ಡಾ. ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಎರಡು ಬಾರಿ ನಿರ್ಮಾಣ ಮಾಡಲಾಗಿತ್ತು.

ಒಂದು ಬಾರಿ ರಸ್ತೆ ಅಗಲೀಕರಣಕ್ಕಾಗಿ ಕೆಂಪು ಕಲ್ಲು ಬಳಸಿ ಕಟ್ಟಲಾಗಿತ್ತು. ಅ ಬಳಿಕ ಮತ್ತೆ ಕಾಂಕ್ರೀಟ್ ಸಿಮೆಂಟ್ ಮೂಲಕ ತಡೆಗೋಡೆ ರೀತಿಯಲ್ಲಿ ಕಾಂಪೌಂಡ್ ಗೋಡೆ ನಿರ್ಮಿಸಗಿತ್ತಾದರೂ ಯಾವುದೇ ಪ್ರಯೋಜನಕ್ಕೆ ಬಾರದೆ ನೆಲಸಮವಾಗಿದೆ.

ರಸ್ತೆ ಅಗಲೀಕರಣ ಕಾಮಗಾರಿ ಜೊತೆ ಸರಾಗವಾಗಿ ಮಳೆ ನೀರು ಹರಿದು ಹೋಗುವ ಉದ್ದೇಶದಿಂದ ಅಲ್ಲಲ್ಲಿ ಸಿಮೆಂಟ್ ಪೈಪ್ ಲೈನ್ ಅಳವಡಿಕೆ ಕಾರ್ಯ ನಡೆಯುತ್ತಿದೆ. ಕಲ್ಲಡ್ಕ ಮುಖ್ಯಪೇಟೆಯಲ್ಲಿರುವ ಡಾ. ಪ್ರಭಾಕರ್ ಭಟ್ ಅವರ ಮನೆಯ ಮುಂಭಾಗದಲ್ಲಿ ಕೂಡ ಸಿಮೆಂಟ್ ಪೈಪ್ ಅಳವಡಿಕೆಗಾಗಿ ಕಾಂಪೌಂಡ್ ನ ಸುತ್ತ ಅಗೆಯಲಾಗಿತ್ತು.

ಕಾಂಪೌಂಡ್‌ನ ಬದಿಯಲ್ಲಿ ಮತ್ತು ಅಡಿಪಾಯದ ವರಗೆ ಅಗೆದ ಪರಿಣಾಮ ಜೊತೆಗೆ ಸಡಿಲ ಮಣ್ಣಿನ ಕಾರಣದಿಂದ ಕಾಂಪೌಂಡ್ ಗೋಡೆ ಜರಿದು ಬಿದ್ದಿದೆ.

ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್ ಕಂಪೆನಿ ಸ್ಥಳೀಯರಿಗೆ ತೊಂದರೆಯಾಗದಂತೆ ಕಾಮಗಾರಿ ನಡೆಸುವಂತೆ ಮತ್ತು ರಸ್ತೆ ಅಗಲೀಕರಣ ದ ಸರಿಯಾದ ಸರ್ವೇ ಕಾರ್ಯದ ಮಾಹಿತಿ ನೀಡುವಂತೆ ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು