ಇತ್ತೀಚಿನ ಸುದ್ದಿ
ಹೆಜಮಾಡಿ ಕೋಡಿಯಲ್ಲಿ ಮೀನುಗಾರಿಕೆ ಬಂದರು, ಧಾರವಾಡ ಮಹಾನಗರ ಪಾಲಿಕೆ ರಚನೆ: ರಾಜ್ಯ ಸಚಿವ ಸಂಪುಟ ಒಪ್ಪಿಗೆ
02/01/2025, 23:25
ಬೆಂಗಳೂರು(reporterkarnataka.com): ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸಲು ಸಚಿವ ಸಂಪುಟ ನಿರ್ಧರಿಸಿದೆ. ಕರ್ನಾಟಕ ಸಾಂಸ್ಕೃತಿ ಕೇಂದ್ರವಾಗಿದೆ. ಮೂರು ಜ್ಞಾನಪೀಠ ಪ್ರಶಸ್ತಿಯವರ ಊರು ಧಾರವಾಡ ವಿದ್ಯಾಕಾಶಿ ಎಂದು ಪ್ರಖ್ಯಾತಿ ಗಳಿಸಿದೆ.
*ಬಂದರು ನಿರ್ಮಾಣಕ್ಕೆ ಅನುಮೋದನೆ;* ಕೇಂದ್ರ ಪುರಸ್ಕೃತ ಯೋಜನೆಯಡಿ ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿಯಲ್ಲಿನ ಮೀನುಗಾರಿಕೆ ಬಂದರು ನಿರ್ಮಾಣ ಕಾಮಗಾರಿಯ 209.13 ಕೋಟಿ ರೂ.ಗಳ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.ಕೇಂದ್ರ ಪುರಸ್ಕೃತ ಯೋಜನೆಯಡಿ ಹಾಲಿ ಇರುವ ಮೀನುಗಾರಿಕೆ ಬಂದರುಗಳ ಆಧುನೀಕರಣ ಹಾಗೂಮೀನುಗಾರಿಕೆ ಬಂದರು ಮತ್ತು ಇಳಿದಾಣ ಕೇಂದ್ರಗಳಲ್ಲಿ ನಿರ್ವಹಣಾ ಹೂಳೆತ್ತುವಿಕೆ ಯ ಕಾಮಗಾರಿಗಳ 84.57 ಕೋಟಿ ರೂ.ಗಳ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
*ಕೆಐಡಿಬಿ ಸಾಲದ ಮಿತಿ 5000 ಕೋಟಿ ರೂ. ಹೆಚ್ಚಳ:* ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಹಣಕಾಸು ಸಂಸ್ಥೆಗಳಿಂದ ಪಡೆಯುವ ಸಾಲದ ಮಿತಿ ಪ್ರಸ್ತುತ ರೂ. 500 ಕೋಟಿ ಗಳಿದ್ದು, ಅದನ್ನು ರೂ. 5000 ಕೋಟಿಗಳಿಗೆ ಹೆಚ್ಚಿಸಲು ಅನುಮೋದನೆ ನೀಡಲಾಗಿದೆ.