2:59 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಹೇಮಾವತಿ ನದಿಗೆ ಬಿದ್ದ ಕಾರು; ಅದೃಷ್ಟವಶಾತ್ ಇಬ್ಬರು ಮಂಗಳೂರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

29/06/2024, 11:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದಿಂದ ಬಣಕಲ್ ಹೋಗುವ ರಸ್ತೆಯ ಮಾರ್ಗ ಮಧ್ಯೆ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೇಮಾವತಿ ನದಿಯ ಕಿರು ಕಾಲುವೆಗೆ ನೇರವಾಗಿ ಬಿದ್ದಿದೆ. ಕಾರು ಮಂಗಳೂರು ಕಡೆಯಿಂದ ಮೂಡಿಗೆರೆ ಕಡೆಗೆ ಸಾಗುತ್ತಿದ್ದಾಗ ಮಳೆಗೆ ತಿರುವು ಕಾಣದೇ ಕೆಳಕ್ಕೆ ಹಳ್ಳಕ್ಕೆ ಬಿದ್ದಿದೆ. ಈ ಹೆದ್ದಾರಿಯಲ್ಲಿ ನೀರು ನಿಲ್ಲುವುದರಿಂದ ಈ ವರೆಗೆ ಸುಮಾರು ಮೂರು ನಾಲ್ಕು ವಾಹನಗಳು ಅಪಘಾತಕ್ಕೀಡಾಗಿವೆ. ವಿಲ್ಲುಪುರಂ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಣಕಲ್ ಸಮೀಪ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ನೀರು ನಿಂತು ಇಂತಹ ಘಟನೆ ಸಂಭವಿಸುತ್ತಿದೆ. ಕಾರಿನಲ್ಲಿ ಇಬ್ಬರೇ ಇದ್ದುದರಿಂದ ಕಾರು ನೀರಿಗೆ ಜಾರಿರುವುದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಮಂಗಳೂರು ಮೂಲದ ಕಾರೆಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು