10:51 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಹೆಣ್ಮಕ್ಕಳ ಮೇಲಿನ ಅತ್ಯಾಚಾರ ವಿರುದ್ಧ ರಾಜಕೀಯ ರಹಿತ ಹೋರಾಟ ನಡೆಯಬೇಕು: ಪ್ರತಿಭಾ ಕುಳಾಯಿ

25/11/2021, 12:42

ಮಂಗಳೂರು(reporterkarnataka.com):

ನಾವು ಸುಮ್ಮನೆ ಇದ್ರೆ ಪ್ರಕರಣಗಳು ಮುಚ್ಚಿ ಹೋಗುತ್ತವೆ. ಎಲ್ಲಾ ಸಂಘಟನೆಗಳು ರಾಜಕೀಯ ಬಿಟ್ಟು ಹೆಣ್ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ದುರುಳರಿಗೆ ಕಠಿಣ ಶಿಕ್ಷೆ ಸಿಗುವಂತೆ ಮಾಡಲು ಹೋರಾಡಬೇಕು ಎಂದು ಕೆಪಿಸಿಸಿ ಕೋ-ಆರ್ಡಿನೇಟರ್ ಪ್ರತಿಭಾ ಕುಳಾಯಿ ಹೇಳಿದರು.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಕೋಮು ವಿಚಾರದಲ್ಲಿ ಎಲ್ಲಾ ಸಂಘಟನೆಗಳು ಮಾತಾಡುತ್ತವೆ. ಆದರೆ ಮಹಿಳೆಯರ ಮೇಲಿನ ಅತ್ಯಾಚಾರದ ಬಗ್ಗೆ ಯಾರೂ ಮಾತಾಡುವುದಿಲ್ಲ, ಈ ವಿಕೃತರಿಗೆ ಕಠಿಣದಿಂದ ಕಠಿಣ ಶಿಕ್ಷೆ ಸಿಗುವಂತೆ ಮಾಡಬೇಕಿದೆ ಎಂದರು.

ಈ ರೀತಿಯ ಅನೇಕ ಪ್ರಕರಣಗಳು ಮುಚ್ಚಿ ಹೋಗುತ್ತಿವೆ. ಹಾಗೆ ಆಗಲು ಬಿಡಬಾರದು. ಹಾಗೆಯೆ ಹೊರರಾಜ್ಯದಿಂದ ಬರುವವರ ಮೇಲೆ ಪೋಲಿಸರು ನಿಗಾ ಇಡಬೇಕು. ಜಿಲ್ಲಾ ಪೋಲಿಸರು ನ್ಯಾಯ ದೊರಕಿಸಿ ಕೊಡುವಲ್ಲಿ ಹೆಚ್ಚಿನ ಪ್ರಯತ್ನ ಮಾಡಬೇಕು ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು