8:27 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಹೆಣ್ಣಿಂದಲೇ ಸಕಲ ಸೌಭಾಗ್ಯ: ಬಂಟ್ವಾಳ ಕಾರ್ಮೆಲ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

09/03/2023, 11:52

ಬಂಟ್ವಾಳ(reporterkarnataka.com):
ಬಂಟ್ವಾಳದ ಕಾರ್ಮೆಲ್ ಕಾಲೇಜಿನಲ್ಲಿ ಬುಧವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ.ಡಾ .ಲತಾ ಫರ್ನಾಂಡಿಸ್ ಎ.ಸಿ., ಮಹಿಳಾ ಸಂಘದ ಸಂಯೋಜಕಿ ಸುಪ್ರೀತಾ ಹಾಗೂ ಸುಚಿಕ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಹಿಳಾ ದಿನಾಚರಣೆಯ ಕುರಿತಾದ ಮಹತ್ವವನ್ನು ಮಹಿಳೆ ಇತಿಹಾಸ ಕಾಲದಿಂದಲೂ ಇಂದಿನವರೆಗೂ ಮಹಿಳೆ ನಡೆದು ಬಂದ ಹಾದಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಉದ್ದೇಶಿಸಿ , ಹೆಣ್ಣಿಲ್ಲದ ಜಗತ್ತನ್ನು ಕಲ್ಪಿಸುವುದು ಅಸಾಧ್ಯ. ಹೆಣ್ಣು ಒಂದು ಶಕ್ತಿ ಆಕೆಯನ್ನು ಗೌರವಿಸಬೇಕು. ಈ ಮಹಿಳಾ ದಿನಾಚರಣೆ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗದೆ ಬದುಕಿನುದ್ದಕ್ಕೂ ನಾವು ಪ್ರತಿಯೊಂದು ಹೆಣ್ಣನ್ನು ಗೌರವಿಸಬೇಕು ಎಂದು ತಿಳಿಸಿದರು.

ಮಹಿಳಾ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಅನೇಕ ಚಟುವಟಿಕೆಗಳನ್ನು ಹಾಗೂ ಮಹಿಳಾ ಸಬಲೀಕರಣದ ಕುರಿತಾದ ಪೋಸ್ಟರ್ ಮೇಕಿಂಗ್ ಸ್ಪರ್ಧೆಯನ್ನು ಅನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಅಷ್ಫಿಯ ನಿರೂಪಿಸಿದರು. ನಸಿಯ ನಿಶಾ ಮಹಿಳಾ ದಿನಾಚರಣೆಯ ಪ್ರಾಮುಖ್ಯತೆಯನ್ನು ತಿಳಿಸಿದರು. ಹಾಗೂ ಪ್ರೇಕ್ಷಾ ಶೆಟ್ಟಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು