11:49 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮಂಗಳೂರು ದಕ್ಷಿಣ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ನಾಮಪತ್ರ ಸಲ್ಲಿಕೆ; ಭಾರಿ ಜನಸ್ತೋಮದೊಂದಿಗೆ ಪಾದಯಾತ್ರೆಯಲ್ಲಿ ಆಗಮನ

20/04/2023, 12:21

ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರು ಗುರುವಾರ ಭಾರಿ ಸಂಖ್ಯೆಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಇದಕ್ಕೆ ಮುನ್ನ ಅಭ್ಯರ್ಥಿಯಾದ
ಜೆ.ಆರ್. ಲೋಬೊ, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಹಾಗೂ ಪಕ್ಷದ ಮುಖಂಡರು ಬೆಳಗ್ಗೆ ನಗರದ ವಿವಿಧ ದೇವಾಲಯಗಳು, ಚರ್ಚ್, ಮಸೀದಿಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ
ಕುದ್ರೋಳಿ ಶ್ರೀ ಗೋಕರ್ಣನಾಥ ಕೇತ್ರದಲ್ಲಿ ಪೂಜೆ ಸಲ್ಲಿಸಿ ಪಕ್ಷದ ಮುಖಂಡರು, ಕಾರ್ಯಕರ್ತರು ಅಭಿಮಾನಿಗಳ ಜತೆಗೆ ಪಾದಯಾತ್ರೆಯಲ್ಲಿ ಮಣ್ಣಗುಡ್ಡೆ ಮಂಗಳಾಸ್ಟೇಡಿಯಂ ಬಳಿ ಆಗಮಿಸಿದರು. ಅಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು. ಬಳಿಕ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿರುವ
ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಪಕ್ಷದ ಹಿರಿಯ ಮುಖಂಡ ಕಳ್ಳಿಗೆ ತಾರನಾಥ ಶೆಟ್ಟಿ, ಎಂ.ಶಶಿಧರ ಹೆಗ್ಡೆ, ಪ್ರಕಾಶ್ ಸಾಲಿಯಾನ್, ಅಬ್ದುಲ್ ಸಲೀಂ.,ಟಿ.ಕೆ.ಸುಧೀರ್, ಸಬಿತಾ ಮಿಸ್ಕಿತ್, ಮೋಹನ್ ಶೆಟ್ಟಿ, ಅಲೆಸ್ಟರ್ ಡಿಕುನ್ನಾ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು