1:23 AM Friday19 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಆರೆಸ್ಸೆಸ್‌ ಗುರಿಯಾಗಿಸಿದ್ದ ನಿರ್ಬಂಧ ಆದೇಶಕ್ಕೆ ಹೈಕೋರ್ಟ್‌ ಧಾರವಾಡ ಪೀಠ ತಾತ್ಕಾಲಿಕ ತಡೆ: ಕೇಂದ್ರ ಸಚಿವ ಜೋಶಿ ಫುಲ್ ಖುಷ್

28/10/2025, 18:41

ನವದೆಹಲಿ(reporterkarnataka.com): ಆರೆಸ್ಸೆಸ್‌ ಗುರಿಯಾಗಿಸಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಪಥ ಸಂಚಲನ, ಸಭೆ-ಸಮಾವೇಶಗಳಿಗೆ ನಿರ್ಬಂಧ ಹೇರಿದ್ದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ಪೀಠ ತಾತ್ಕಾಲಿಕ ತಡೆ ನೀಡಿ ನೀತಿಪಾಠ ಹೇಳಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಚಾಟಿ ಬೀಸಿದ್ದಾರೆ.
ನವದೆಹಲಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರದ ಜಾಗ, ಆವರಣಗಳಲ್ಲಿ ಕಾರ್ಯಕ್ರಮ ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯಬೇಕೆಂದು ಹೊರಡಿಸಿದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ಪೀಠ ತಾತ್ಕಾಲಿಕ ತಡೆ ನೀಡಿದೆ. ಇದು ಸಂವಿಧಾನದ ಮೌಲ್ಯಕ್ಕೆ ಸಿಕ್ಕ ಜಯವಾಗಿದೆ ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್‌ ಸರ್ಕಾರ ‎ಪೂರ್ವಾಗ್ರಹಪೀಡಿತವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಗುರಿಯಾಗಿಸಿಕೊಂಡು ಸರ್ಕಾರದ ಆಸ್ತಿ ನೆಪದಲ್ಲಿ ರಸ್ತೆ, ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರೇತರ ಚಟುವಟಿಕೆಗಳಿಗೆ ನಿರ್ಬಂಧ ಹೇರಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಜೋಶಿ ಖಂಡಿಸಿದರು.
ರಾಜ್ಯ ಕಾಂಗ್ರೆಸ್‌ ಸರ್ಕಾರ ಸಂವಿಧಾನದ ಮೂಲ ಆಶಯಗಳ ವಿರೋಧವಾಗಿ ನಡೆಯುತ್ತಿದೆ ಎಂಬುದಕ್ಕೆ ಹೈಕೋರ್ಟ್‌ ಪೀಠ ನೀಡಿದ ಈ ಮಹತ್ವದ ತೀರ್ಪೇ ಸಾಕ್ಷಿ ಎಂದ ಸಚಿವರು, ‎ಸಂವಿಧಾನ ವಿರೋಧಿ ಕ್ರಮಗಳನ್ನು ಅನುಸರಿಸುವ ಸರ್ಕಾರಕ್ಕೆ ನ್ಯಾಯಾಲಯದ ಈ ತೀರ್ಪು ಎಚ್ಚರಿಕೆಯ ಗಂಟೆಯಾಗಿದೆ. ಈ ಸರ್ಕಾರ ಇನ್ನಾದರೂ ‎ಸಂವಿಧಾನದ ಮೂಲ ಆಶಯ ಗೌರವಿಸುವ ಕಾರ್ಯವನ್ನು ಪಾಲಿಸಲಿ ಸಲಹೆ ನೀಡಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳನ್ನೇ ಗುರಿಯಾಗಿಸಿಕೊಂಡು ಹೊರಡಿಸಿದ್ದ ಈ ಆದೇಶದ ಹಿಂದಿನ ಪಿತೂರಿಗೆ ನ್ಯಾಯಾಲಯ ತಡೆವೊಡ್ಡಿದಂತಾಗಿದೆ. ಅಲ್ಲದೇ, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಪಾಠವನ್ನು ಸರ್ಕಾರಕ್ಕೆ ಮಾಡಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು