9:34 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಹೊಸ ವಿದ್ಯುತ್ ಗ್ರಾಹಕರು ಸ್ಮಾರ್ಟ್ ಮೀಟರ್ ಅಳವಡಿಕೆ ವಿರುದ್ಧದ ಅರ್ಜಿ ಹೈಕೋರ್ಟ್‌ ವಜಾ

13/08/2025, 21:57

ಬೆಂಗಳೂರು(reporterkarnataka.com): ಹೊಸ ವಿದ್ಯುತ್ ಗ್ರಾಹಕರು ಸ್ಮಾರ್ಟ್ ಮೀಟರ್‌ ಅಳವಡಿಸುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಎರಡು ಅರ್ಜಿಗಳನ್ನು ಉಚ್ಛ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ.
ಹೊಸ ಮತ್ತು ತಾತ್ಕಾಲಿಕ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಿಚಾರಣೆಗೆ ಪರಿಗಣಿಸುವ ಕುರಿತು ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಅರ್ಜಿಯನ್ನು ವಜಾಗೊಳಿಸಿದೆ.
ಸ್ಮಾರ್ಟ್‌ ಮೀಟರ್‌ ಕುರಿತು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಈಗಾಗಲೇ ಹೈಕೋರ್ಟ್‌ನ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಾಕಿ ಇದೆ ಎಂಬ ಅಂಶವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ, ವಿಭಾಗೀಯ ಪೀಠದಲ್ಲಿ ಈ ವಿಚಾರಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ದಾಖಲಾಗಿದೆ. ಪಿಐಎಲ್ ನಲ್ಲಿ ರಿಟ್ ಅರ್ಜಿಯ ಅಂಶಗಳನ್ನು ಯಥಾವತ್ತಾಗಿ ಉಲ್ಲೇಖಿಸಲಾಗಿದೆ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದರು.
ಈ ಅರ್ಜಿದಾರರು ಹೊಸ ವಿದ್ಯುತ್‌ ಗ್ರಾಹಕರಲ್ಲ. ಹಾಗಾಗಿ, ಅವರ ಮನೆಗಳಿಗೆ ಸ್ಮಾರ್ಟ್ ಮೀಟರ್‌ಗಳನ್ನು ಅಳವಡಿಸಲು ರಾಜ್ಯ ಸರ್ಕಾರ ಒತ್ತಾಯಿಸಿಲ್ಲ. ಸ್ಮಾರ್ಟ್ ಮೀಟರ್ ಅಳವಡಿಕೆ ಹೊಸ ಮನೆಗಳಿಗೆ ಮಾತ್ರವೇ ಹೊರತು ಅಸ್ತಿತ್ವದಲ್ಲಿರುವ ಗ್ರಾಹಕರಿಗೆ ಅಲ್ಲ. ಹಾಲಿ ಗ್ರಾಹಕರು ಇಚ್ಛಿಸಿದ್ದಲ್ಲಿ ಮಾತ್ರ ಸ್ಮಾರ್ಟ್‌ ಮೀಟರ್‌ ಅಳವಡಿಸಿಕೊಳ್ಳಬಹುದು ಎಂದು ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಈ ಹಿಂದೆಯೇ ಹೇಳಿದ್ದರು. ಈ ಎಲ್ಲ ಅಂಶಗಳನ್ನು ಗಮನಲ್ಲಿಟ್ಟುಕೊಂಡು ಏಕ ಸದ್ಯ ಪೀಠವು ರಿಟ್‌ ಅರ್ಜಿಯನ್ನು ತಿರಸ್ಕರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು