6:19 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ | ಸಿಜೆ ಜತೆ ಚರ್ಚಿಸಿ ಪೀಠ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ದರಾಮಯ್ಯ ಭರವಸೆ

03/12/2025, 22:13

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಅತ್ಯವಶ್ಯಕತೆ ಇದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಜೊತೆಯಲ್ಲಿ ಚರ್ಚಿಸಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಕರಾವಳಿ ಭಾಗದ ವಕೀಲರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಹೈಕೋರ್ಟ್ ಪೀಠ ಹೋರಾಟ ಸಮಿತಿ ಸಂಚಾಲಕರು ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರವರು,ಕರಾವಳಿ ಭಾಗದ ಜನರಿಗೆ ಕ್ಷಿಪ್ರಗತಿಯಲ್ಲಿ ನ್ಯಾಯ ದೊರೆಯುವಂತಾಗಲು ಹೈಕೋರ್ಟ್ ಪೀಠ ಸ್ಥಾಪಿಸಬೇಕು ಎಂದು ಮನವಿ ಮಾಡಿದರು.
ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಯವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಜೊತೆಯಲ್ಲಿ ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು. ಅವರ ಜೊತೆಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಅವರು ಆಶ್ವಾಸನೆ ನೀಡಿದರು.
ಈ ಸಂದರ್ಭದಲ್ಲಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಎಚ್. ವಿ., ಪ್ರಧಾನ ಸರಕಾರಿ ಅಭಿಯೋಜಕರಾದ ಎಂ. ಪಿ. ನರೋನ್ಹ, ಟಿ.ಎನ್. ಪೂಜಾರಿ, ಎಂ. ಆರ್. ಬಲ್ಲಾಳ್, ಎಂ. ಯಶವಂತ ಮರೋಳಿ, ಮಂಗಳೂರು ವಕೀಲರ ಸಂಘ ದ ಉಪಾಧ್ಯಕ್ಷರಾದ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್, ಜೊತೆ ಕಾರ್ಯದರ್ಶಿ ಜ್ಯೋತಿ, ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ರಿಚರ್ಡ್ ಡಿಕೋಸ್ಟ, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ ರೈ, ಮೂಡುಬಿದ್ರೆ ವಕೀಲರ ಸಂಘದ ಅಧ್ಯಕ್ಷ ಹರೀಶ್ ಕುಮಾರ್, ಸಮನಾ ಶರಣ್, ಶಾಲಿನಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ಕರಾವಳಿ ಭಾಗದ ವಕೀಲರ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು