8:22 PM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ತಪಾಸಣೆಗೆ ಸಚಿವ ಅಂಗಾರ ಸೂಚನೆ: ತಪ್ಪಿದ್ದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ

07/09/2021, 11:02

ಮಂಗಳೂರು (reporterkarnataka.com.):

ಕೋವಿಡ್-19 ಸೋಂಕು ಹೆಚ್ಚು ಕಂಡು ಬರುವ ಪ್ರದೇಶಗಳಲ್ಲಿ ಸಂಬಂಧಿಸಿದ ಆಯಾ ತಾಲೂಕುಗಳ ಆರೋಗ್ಯಾಧಿಕಾರಿಗಳು ಹೆಚ್ಚಿನ ತಪಾಸಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಈ ನಿರ್ದೇಶನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು  ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ನಿರ್ಬಂಧಗಳ ಕುರಿತು ಚರ್ಚಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೊರೋನಾ ಸೋಂಕು ನಿಯಂತ್ರಿಸುವಿಕೆಯಲ್ಲಿ ಹೆಚ್ಚಿನ ತಪಾಸಣೆ ಅತಿ ಅಗತ್ಯ. ಈ ದಿಸೆಯಲ್ಲಿ ಜಿಲ್ಲಾ ಹಾಗೂ ತಾಲೂಕುಗಳ ಆರೋಗ್ಯ ಅಧಿಕಾರಿಗಳು, ಹಿರಿಯ ವೈದ್ಯಾಧಿಕಾರಿಗಳು ಕೋವಿಡ್ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ತಪಾಸಣೆಯನ್ನು ತುರ್ತಾಗಿ ನಡೆಸಬೇಕು, ಇಲ್ಲಿ ನಿರ್ಲಕ್ಷ್ಯ ಮಾಡಬಾರದು, ಮಾಡಿದ್ದಲ್ಲಿ ಸಂಬಂಧಿಸಿ ತಾಲೂಕುಗಳ ಆರೋಗ್ಯಾಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಅವರು ನೀಡಿದರು. 
ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಮಾತನಾಡಿ, ಸಚಿವರ ಸೂಚನೆಯಂತೆ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ತಪಾಸಣೆ ಮಾಡಬೇಕು, ಅದನ್ನು ಶೇ.100 ರಷ್ಟು ಕಾರ್ಯಗತಗೊಳ್ಳಬೇಕು, ಇದನ್ನು ತಹಶಿಲ್ದಾರ್ ಹಾಗೂ  ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿಗಳು ಮೇಲುಸ್ತುವಾರಿ ಮಾಡಬೇಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಗ್ರಾಮ ಮಟ್ಟದಲ್ಲಿರುವ ಕೋವಿಡ್ ಪಾಸಿಟಿವಿಟಿ ಸೂಚ್ಯಂಕದ ಬಗ್ಗೆ ಸಂಬಂಧಿಸಿದ ಆರೋಗ್ಯಾಧಿಕಾರಿಗಳು ಪಟ್ಟಿ ಒದಗಿಸುವಂತೆ ಅವರು ಸೂಚಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು