5:21 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ ಸ್ವೀಕಾರ

16/06/2026, 23:24

ಬೆಂಗಳೂರು(reporterkarnataka.com): ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಖಾತೆ ಹಂಚಿಕೆ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ಬೆಂಗಳೂರು ಅಭಿವೃದ್ಧಿ ಖಾತೆ ವಿಚಾರವಾಗಿ ಅಸಮಾಧಾನಗೊಂಡಿದ್ದ ಹಿರಿಯ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಪಟ್ಟನ್ನು ಸಡಿಲಗೊಸಿದ್ದು, ಕೊನೆಗೂ ಅಧಿಕಾರ ಸ್ವೀಕರಿಸಲು ಸಮ್ಮತಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಮತ್ತು ಬಿಎಂಆರ್ಡಿಎ (BMRDA) ಸಂಸ್ಥೆಗಳನ್ನು ಹೊರತುಪಡಿಸಿ ಕೇವಲ ಬೆಂಗಳೂರು ಅಭಿವೃದ್ಧಿ ಖಾತೆ ನೀಡಿರುವುದಕ್ಕೆ ಅವರು ಈ ಹಿಂದೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.
ಈ ವಿಭಜನೆಯಿಂದಾಗಿ ಆಡಳಿತಾತ್ಮಕ ಕೆಲಸ ಕಾರ್ಯಗಳಿಗೆ ಮತ್ತು ವಿವಿಧ ಇಲಾಖೆಗಳ ನಡುವಿನ ಸಮನ್ವಯತೆಗೆ ದೊಡ್ಡ ಮಟ್ಟದ ಸಮಸ್ಯೆ ಎದುರಾಗುತ್ತದೆ ಎಂಬ ಕಾರಣ ನೀಡಿ ಅವರು ಅಧಿಕಾರ ಸ್ವೀಕರಿಸದೆ ದೂರ ಉಳಿದಿದ್ದರು. ಆದರೆ, ಈಗ ನಡೆದಿರುವ ಸುದೀರ್ಘ ಮಾತುಕತೆಗಳು ಫಲಪ್ರದವಾಗಿದ್ದು, ಅವರು ಬೆಂಗಳೂರು ಅಭಿವೃದ್ಧಿ ಇಲಾಖೆಯ ಸಚಿವರಾಗಿ ಅಧಿಕೃತವಾಗಿ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದಾರೆ.

*ದೆಹಲಿ ಮಟ್ಟದಲ್ಲಿ ನಡೆದಿತ್ತು ಹೈವೋಲ್ಟೇಜ್ ಸಂಧಾನ!*
ಖಾತೆ ಹಂಚಿಕೆಯಿಂದ ತೀವ್ರ ಅಸಮಾಧಾನಗೊಂಡಿದ್ದ ಕೃಷ್ಣ ಬೈರೇಗೌಡ ಅವರು ನೇರವಾಗಿ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದರು. ಬೆಂಗಳೂರಿನ ಪ್ರಮುಖ ಎರಡು ಪ್ರಾಧಿಕಾರಗಳನ್ನು ನೀಡದೆ ಕೇವಲ ನಗರ ಅಭಿವೃದ್ಧಿ ಖಾತೆ ನಿಭಾಯಿಸುವುದರಿಂದ ಆಡಳಿತದಲ್ಲಿ ಉಂಟಾಗುವ ಗೊಂದಲಗಳು ಮತ್ತು ತಾಂತ್ರಿಕ ಸಮಸ್ಯೆಗಳ ಬಗ್ಗೆ ಹಿರಿಯ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿದ್ದರು. ಇದೇ ಸಂದರ್ಭದಲ್ಲಿ ದೆಹಲಿಯಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೂ ಕೃಷ್ಣ ಬೈರೇಗೌಡ ಅವರು ಮುಖಾಮುಖಿ ಮಾತುಕತೆ ನಡೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು