4:47 AM Friday18 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು

05/04/2026, 12:04

ಬೆಂಗಳೂರು(reporterkarnataka.com): ನಗರದ ವಿವಿಧೆಡೆ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರನ್ನು ಗುರುತಿಸಿ ಗಡಿಪಾರು ಮಾಡುವ ಕಾರ್ಯಾಚರಣೆ ತೀವ್ರಗೊಂಡಿದೆ. ಇದುವರೆಗೆ ಬೆಂಗಳೂರಿನಿಂದ 272 ಅಕ್ರಮ ಬಾಂಗ್ಲಾ ವಲಸಿಗರನ್ನ ಗಡಿಪಾರು ಮಾಡಲಾಗಿದೆ.

ಈ ಪೈಕಿ 178 ಪುರುಷರು, 94 ಮಹಿಳೆಯರು ಮತ್ತು 12 ಮಕ್ಕಳು ಸೇರಿದ್ದಾರೆ. ಎಲ್ಲರನ್ನು ಪೊಲೀಸರು ಪತ್ತೆ ಮಾಡಿ ಒಟ್ಟಿಗೆ ಗಡಿಪಾರು ಮಾಡಿದ್ದಾರೆ. ಜೊತೆಗೆ ಸಿಸಿಬಿ ಪೊಲೀಸರು ಬಾಂಗ್ಲಾ ವಲಸಿಗರನ್ನ ಕರೆತರುತಿದ್ದವರ ಮೂಲಕ್ಕೆ ಕೈ ಹಾಕಿದ್ದಾರೆ. ಸಿಸಿಬಿ ಪೊಲೀಸರು ಇಡೀ ಬೆಂಗಳೂರಿನಾದ್ಯಂತ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ಶುರು ಮಾಡಿದ್ದಾರೆ. ಸದ್ಯ ಗುರುತಿಸಲಾದ ಅಕ್ರಮ ವಲಸಿಗರನ್ನು ತಮ್ಮ ದೇಶಕ್ಕೆ ಬಿಡುವ ಕೆಲಸ ಮುಂದುವರಿಸಿದ್ದಾರೆ. ತ್ರಿಪುರ ಗಡಿಯಿಂದ ಬಿಎಸ್‌ಎಫ್ (ಬಾರ್ಡರ್ ಸೆಕ್ಯುರಿಟಿ ಫೋರ್ಸ್) ಮೂಲಕ ಇವರನ್ನು ಗಡಿಪಾರು ಮಾಡಲಾಗುತ್ತಿದೆ. ಪಶ್ಚಿಮ ಬಂಗಾಳ ಎಲೆಕ್ಷನ್ ಹಿನ್ನೆಲೆ ತ್ರಿಪುರಾ ಗಡಿಯಿಂದ ಗಡಿಪಾರು ಮಾಡಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು