12:40 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಹೀಗೊಂದು ಹಾವಿನ ದ್ವೇಷ: 25 ವರ್ಷಗಳಲ್ಲಿ ಒಂದೇ ಕುಟುಂಬದ 11 ಮಂದಿಗೆ ಕಚ್ಚಿದ ವಿಷ ಸರ್ಪ; 5 ಮಂದಿ ಸಾವು

24/08/2022, 13:41

ತುಮಕೂರು(reporterkarnataka.com):  ಇದು ವಿಚಿತ್ರವಾದರೂ ಸತ್ಯ. ಕಳೆದ 25 ವರ್ಷಗಳಲ್ಲಿ ಒಂದೇ ಕುಟುಂಬದ 11 ಮಂದಿಗೆ ಹಾವು ಕಚ್ಚಿದ್ದು,ಇದರಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ. ಇದೆಲ್ಲ ನಡೆದಿರುವುದು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೊಗರಿ ಘಟ್ಟ ಗ್ರಾಮದಲ್ಲಿ. ಕುಟುಂಬಸ್ಥರು ಇದೀಗ ತಮ್ಮ ಹೊಲಗದ್ದೆಗೆ ಹೋಗಲು ಭಯ ಪಡುತ್ತಿದ್ದಾರೆ.

ಮೊನ್ನೆ ಮೊನ್ನೆ ಈ ಕುಟುಂಬದ ಗೋವಿಂದ ರಾಜು ಎಂಬುವರು ಹೊಲದಲ್ಲಿ ನೀರು ಹಾಯಿಸಲು ಹೋದಾಗ ಹಾವು ಕಚ್ಚಿ ಮೃತಪಟ್ಟಿದ್ದರು.

ಹೊಲದಲ್ಲಿ ಮೆಣಸಿನ ಗಿಡ ಬೆಳೆದಿದ್ದರೂ ಅದರ ಸಮೀಪ ಸುಳಿಯದಂತಾಗಿದೆ. ಇನ್ನೊಂದೆಡೆ, ಮಾನಸಿಕವಾಗಿ ಇಡೀ ಕುಟುಂಬವೇ ಜರ್ಜರಿತವಾಗಿದೆ. ಕೂಲಿ ಕಾರ್ಮಿಕರು ಸಹ ಇವರ ಹೊಲಗದ್ದೆಯಲ್ಲಿ ಕೆಲಸ ಮಾಡಲು ಮುಂದೆ ಬರುತ್ತಿಲ್ಲ. 

ನಿರಂತರವಾಗಿ ಹಾವಿನ ಆಕ್ರೋಶ ಒಳಗಾಗುತ್ತಿರುವ ಈ ಕುಟುಂಬ, ರಾಹು ಕೇತು ಪೂಜೆಯನ್ನು ಸಹ ಮಾಡಿದೆ.ಆದರೆ, ಯಾವುದೂ ಕೂಡ ಪ್ರಯೋಜನಕ್ಕೆ ಬಾರದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು