ಇತ್ತೀಚಿನ ಸುದ್ದಿ
ಹಿಜಾಬ್- ಕೇಸರಿ ವಿವಾದ; ಉಡುಪಿ ಜಿಲ್ಲೆಯಲ್ಲಿ ಫೆ.19ರ ವರೆಗೆ 144 ಸೆಕ್ಷನ್ ಜಾರಿ: ಜಿಲ್ಲಾಧಿಕಾರಿ ಆದೇಶ
13/02/2022, 19:02
ಉಡುಪಿ(reporterkarnataka.com): ರಾಜ್ಯದಲ್ಲಿ ಹಿಜಾಬ್- ಕೇಸರಿ ವಿವಾದದ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಫೆ. 14 ರಿಂದ 19 ರ ವರೆಗೆ ಸೆಕ್ಷನ್ 144 ಜಾರಿಗೆಗೊಳಿಸಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಸೋಮವಾರದಿಂದ ಶಿಕ್ಷಣ ಸಂಸ್ಥೆಗಳು ಆರಂಭವಾಗುವ ಹಿನ್ನಲೆಯಲ್ಲಿ ಈ ಆದೇಶವನ್ನು ಹೊರಡಿಸಿದ್ದು ಈ ವೇಳೆಯಲ್ಲಿ ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ, ಪ್ರತಿಭಟನೆ, ಮೆರವಣಿಗೆ ಪರ ವಿರುದ್ಧ ಘೋಷಣೆ ಕೂಗುವಂತಿಲ್ಲ ಯಾವುದೇ ವ್ಯಕ್ತಿ ಜಾತಿ ಧರ್ಮಕ್ಕೆ ನೈತಿಕತೆ ವಿರುದ್ಧ ನಡೆದುಕೊಳ್ಳುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ