3:08 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಹಿಜಾಬ್ ಪ್ರಕರಣ: ಹೈಕೋರ್ಟ್ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ರಿಟ್ ಅರ್ಜಿ

12/02/2022, 10:45

ಬೆಂಗಳೂರು(reporterkarnataka.com); ರಾಜ್ಯದಲ್ಲಿ ಸಾಕಷ್ಟು ಕೋಲಾಹಲ ಸೃಷ್ಟಿಸಿದ

ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶ ಪ್ರಶ್ನಿಸಿ ಅರ್ಜಿದಾರರು ಸುಪ್ರೀಂಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಧಾರ್ಮಿಕ ಗುರುತು ಇರುವ ಬಟ್ಟೆಗಳನ್ನು ಶಾಲೆ-ಕಾಲೇಜುಗಳಲ್ಲಿ ಧರಿಸಬಾರದು, ಸ್ಥಗಿತಗೊಂಡಿದ್ದ ಶಾಲೆಗಳನ್ನು ಪುನರಾರಂಭಿಸುವಂತೆ ಹೈಕೋರ್ಟ್ ಗುರುವಾರ ಆದೇಶ ನೀಡಿತ್ತು. ಇದರಂತೆ ಸೋಮವಾರದಿಂದ ಶಾಲೆ-ಕಾಲೇಜುಗಳು ಪುನರಾರಂಭವಾಗಲಿದೆ.

ಹೈಕೋರ್ಟ್ ನೀಡಿರುವ ಮೌಖಿಕ ಆದೇಶವನ್ನು ಪ್ರಶ್ನಿಸಿ ತಮ್ಮ ವಕೀಲರ ಮೂಲಕ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಸಂವಿಧಾನದ ಆಶಯಗಳಿಗೆ ವಿರುದ್ಧವಾದ ಹಾಗೂ ಧಾರ್ಮಿಕ ಸ್ವಾತಂತ್ರ್ಯವನ್ನು ಪಾಲಿಸುವ ಹಕ್ಕನ್ನು ವಿರೋಧಿಸುವ ತೀರ್ಪು ಇದಾಗಿದೆ ಎಂದು ಅರ್ಜಿದಾರರು ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಹಿಜಾಬ್ ವಿವಾದ ಸಂಬಂಧ ರಾಜ್ಯ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾದ ಅರ್ಜಿಗಳ ಸಂಪೂರ್ಣ ವಿಚಾರಣೆ ಬಾಕಿಯಿರುವಾಗಲೇ ಕೆಲವು ವಿದ್ಯಾರ್ಥಿಗಳು ಮಧ್ಯಂತರ ಆದೇಶ ಪ್ರಶ್ನಿಸಿ ತುರ್ತು ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು