ಇತ್ತೀಚಿನ ಸುದ್ದಿ
ಹಿಜಾಬ್: ಸರಕಾರದ ಆದೇಶ ಎತ್ತಿ ಹಿಡಿದ ರಾಜ್ಯ ಹೈಕೋರ್ಟ್; ರಿಟ್ ಅರ್ಜಿ ವಜಾ
15/03/2022, 11:23
ಬೆಂಗಳೂರು(reporterkarnataka.com): ಶಾಲಾ-ಕಾಲೇಜುಗಳ ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಲು ರಾಜ್ಯ ಹೈಕೋರ್ಟ್ ನಿರಾಕರಿಸಿದೆ. ಹಿಜಾಬ್ ಧರಿಸುವುದು ಇಸ್ಲಾಂ ನ ಅಗತ್ಯವಾದ ಧಾರ್ಮಿಕ ಆಚರಣೆಯಲ್ಲ. ಸರಕಾರದ ಆದೇಶ ಕಾನೂನುಬದ್ಧವಾಗಿದೆ ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ವ್ಯಾಖ್ಯಾನಿಸಿದೆ. ಹಿಜಾಬ್ ಗೆ ಅವಕಾಶ ನೀಡುವಂತಹ ರಿಟ್ ಅರ್ಜಿಯನ್ನು ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆಎಂ ಖಾಜಿ ಅವರನ್ನೊಳಗೊಂಡ ಪೀಠವು ಹಿಜಾಬ್ ಅರ್ಜಿಯ ವಿಚಾರಣೆ ನಡೆಸಿ ಈ ತೀರ್ಪು ಪ್ರಕಟಿಸಿದೆ.
ಹಿರಿಯ ವಕೀಲ ದೇವದತ್ತ್ ಕಾಮತ್ ಅವರು ಕರ್ನಾಟಕ ಹೈಕೋರ್ಟ್ ನ ಪೂರ್ಣ ಪೀಠದ ಮುಂದೆ ಮುಸ್ಲಿಂ ಹುಡುಗಿಯರ ಪರವಾಗಿ ತಮ್ಮ ವಾದಗಳನ್ನು ಮಂಡಿಸಿದ್ದರು. ಹಿಜಾಬ್ (ಹೆಡ್ ಸ್ಕಾರ್ಫ್) ಧರಿಸಿದ್ದಕ್ಕಾಗಿ ಸರ್ಕಾರಿ ಪಿಯು ಕಾಲೇಜಿನ ಪ್ರವೇಶವನ್ನು ನಿರಾಕರಿಸಿರುವ ಕ್ರಮವನ್ನು ಅವರು ಪ್ರಶ್ನಿಸಿದ್ದರು.