4:25 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಹಿಜಾಬ್ ತೀರ್ಪು: ಮಂಗಳೂರಿನ ಹಳೆ ಬಂದರು, ಧಕ್ಕೆ, ಉಳ್ಳಾಲ ಪ್ರದೇಶದಲ್ಲಿ ವ್ಯಾಪಾರಿಗಳಿಂದ ಬಂದ್ ಆಚರಣೆ

17/03/2022, 10:53

ಮಂಗಳೂರು(reporterkarnataka.com): ಹಿಜಾಬ್ ಕುರಿತು ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರತಿಭಟಿಸಿ ಇಂದು ಮಂಗಳೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳು ಅಂಗಡಿ ಮುಂಗಟ್ಟು ಬಂದ್ ಮಾಡಿ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದರು. ಕರ್ನಾಟಕ ಅಮೀರ್ ಎ ಶರೀಯತ್ ನ ಮೌಲಾನಾ ಸಗೀರ್ ಅಹ್ಮದ್ ರಾಜ್ಯ ಬಂದ್ ಗೆ ಕರೆ ನೀಡಿದ್ದರು.

ಮುಸ್ಲಿಂ ಸಮುದಾಯಕ್ಕೆ ಸೇರಿದ ಬಹುತೇಕ ಅಂಗಡಿ, ಮಳಿಗೆ, ವಾಣಿಜ್ಯ ಸಂಕೀರ್ಣ, ಹೋಟೆಲ್ ಬಂದ್ ನಲ್ಲಿ ಪಾಲ್ಗೊಂಡಿದ್ದವು. 

ನಗರದ ಬಂದರು, ಧಕ್ಕೆ, ಕಂಡತಪಳ್ಳಿ ಪ್ರದೇಶದಲ್ಲಿ ಮುಸ್ಲಿಮರು ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿದ್ದರು. ಸ್ಟೇಟ್ ಬ್ಯಾಂಕ್, ಮಾರುಕಟ್ಟೆ ರಸ್ತೆಯಲ್ಲಿ ಬೀದಿ ವ್ಯಾಪಾರಿಗಳಿಲ್ಲದೆ ಬಿಕೋ ಎನ್ನುತ್ತಿತ್ತು. ಕೆಲವು ಶಿಕ್ಷಣ ಸಂಸ್ಥೆಗಳು ಹಾಗೂ ಮದ್ರಸಾಗಳು ಬಂದ್ ನಲ್ಲಿ ಪಾಲ್ಗೊಂಡಿದ್ದವು. ನಗರದ ಹೊರವಲಯದ ಉಳ್ಳಾಲ, ತೊಕ್ಕೊಟ್ಟು ಪ್ರದೇಶದಲ್ಲಿಯೂ ಬಂದ್ ಆಚರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು