ಇತ್ತೀಚಿನ ಸುದ್ದಿ
ಹಿಜಾಬ್ ವಿವಾದ: ಬಾಗಲಕೋಟೆಯ ಉರ್ದು ವಿಭಾಗದಲ್ಲಿ ಇಡೀ ಕ್ಲಾಸ್ಗೆ ಒಬ್ಬಳೇ ವಿದ್ಯಾರ್ಥಿನಿ..!
15/02/2022, 22:19
ಬಾಗಲಕೋಟೆ(reporterkarnataka.com): ಹಿಜಾಬ್ ವಿವಾದ ಬಿಸಿ ಇಡೀ ರಾಜ್ಯಕ್ಕೆ ಹಬ್ಬಿದ್ದು, ಇದಕ್ಕೆ ಸಾಕ್ಷಿ ಎನ್ನುವಂತೆ ಬಾಗಲಕೊಟೆಯ ಸರಕಾರಿ ಬಾಲಕಿಯರ ಪ್ರೌಢಶಾಲೆ ಹುಬ್ಬೇರಿಸುವಂತೆ ಮಾಡಿದೆ. ಇಲ್ಲಿನ ಉರ್ದು ವಿಭಾಗದ 10ನೇ ತರಗತಿಯ 19 ವಿದ್ಯಾರ್ಥಿಗಳ ಪೈಕಿ ಒಬ್ಬಳು ಮಾತ್ರ ಹಾಜರಾಗಿದ್ದಾಳೆ.
ಇಡೀ ಕ್ಲಾಸ್ ನಲ್ಲಿ ಒಬ್ಬಳೇ ಒಬ್ಬಳು ವಿದ್ಯಾರ್ಥಿನಿ ತರಗತಿಗೆ ಹಾಜರಾಗಿದ್ದು, ಶಿಕ್ಷಕ ಶಿಕ್ಷಕಿಯರು ಇವಳಿಗೆ ಪಾಠ ಮಾಡುತ್ತಿದ್ದಾರೆ. ಒಟ್ಟು 19 ಜನ ವಿದ್ಯಾರ್ಥಿನಿಯರಿದ್ದು ಒಬ್ಬಳನ್ನು ಬಿಟ್ಟು ಎಲ್ಲರೂ ಗೈರಾಗಿದ್ದಾರೆ.
ಇನ್ನು ಶಾಲೆಗೆ ಬಂದ ಏಕೈಕ ವಿದ್ಯಾರ್ಥಿನಿ ಜಬೀನ್ ಮಕಾಂದಾರ, “ತರಗತಿಗೆ ನಾನು ಒಬ್ಬಳೇ ಬಂದಿದ್ದೇನೆ, ನನ್ನ ಸ್ನೇಹಿತೆಯರು ಯಾರೂ ಬಂದಿಲ್ಲ. ಇದು ಬೇಸರ ತರಿಸಿದೆ. ಯಾವುದೇ ಭಯ ಬೇಡ ಕ್ಲಾಸ್ ಗೆ ಬನ್ನಿ” ಅಂತ ಆಕೆಯ ಸಹಪಾಠಿಗಳಿಗೆ ಮನವಿ ಮಾಡಿದ್ದಾರೆ.
ಮನೆಯಿಂದ ಹಿಜಾಬ್ ಧರಿಸಿಕೊಂಡು ಬರೋದು ಪುನಃ ಶಾಲೆಯಲ್ಲಿ ಅದನ್ನು ತೆಗೆಯೋದು ಈ ಎಲ್ಲ ಮುಜುಗರ ಯಾಕೆ ಅಂತ ವಿದ್ಯಾರ್ಥಿನಿಯರು ಶಾಲೆಗೆ ಹೋಗದೆ ಇರೋದೆ ಒಳ್ಳೆಯದು ಅಂತ ವಿದ್ಯಾರ್ಥಿನಿಯರು, ಪೋಷಕರು ನಿರ್ಧರಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.