ಇತ್ತೀಚಿನ ಸುದ್ದಿ
ಹಿಜಾಬ್ ತೀರ್ಪು; ನಾಳೆ ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ ಆದೇಶ
14/03/2022, 22:16

ಮಂಗಳೂರು(reporterkarnataka.com): ರಾಜ್ಯದಲ್ಲಿ ಸಾಕಷ್ಟು ಸುದ್ದಿ ಮಾಡಿದ ಹಿಜಾಬ್ ವಿವಾದ ಕುರಿತು ಹೈಕೋರ್ಟ್ ಮಾ. 15ರಂದು ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿದೆ.
ಆಂತರಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ.ಬಾಹ್ಯ ಪರೀಕ್ಷೆಗಳನ್ನು ವೇಳಾಪಟ್ಟಿಯಂತೆ ನಡೆಸಬಹುದು. ರಜೆಯ ವಿಚಾರ ಪ್ರಾಥಮಿಕ ಶಾಲೆ ಸೇರಿದಂತೆ ಅಂಗನವಾಡಿ ಮಕ್ಕಳಿಗೂ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.