5:59 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಹಿಜಾಬ್ ವಿವಾದವನ್ನು ಕಾಂಗ್ರೆಸ್ ರಾಜಕೀಯಗೊಳಿಸಲು ಯತ್ನಿಸುತ್ತಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪ

21/02/2022, 23:49

ಹೊಸದಿಲ್ಲಿ(reporterkarnataka.com): ಹಿಜಾಬ್ ವಿವಾದವನ್ನು ಕಾಂಗ್ರೆಸ್ ಮತ್ತಿತರ ವಿಪಕ್ಷಗಳು ರಾಜಕೀಯಗೊಳಿಸಲು ನಡೆಸುವ ಯತ್ನ ಸಫಲವಾಗದು ಎಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಎಲ್ಲ ವಿದ್ಯಾರ್ಥಿಗಳು -ಅವರು ಯಾವುದೇ ಜಾತಿ,ಮತ, ಧರ್ಮಕ್ಕೆ ಸೇರಿರಲಿ ಶಾಲಾ ಸಮವಸ್ತ್ರ ನಿಯಮವನ್ನು ಪಾಲಿಸುವುದು ಅತ್ಯಗತ್ಯ ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ. ಅವರು ಸಿಎನ್‌ಎನ್ ನ್ಯೂಸ್ ಗೆ ನೀಡಿದ ಸಂದರ್ಶನವೊಂದರಲ್ಲಿ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಶಾಲೆಗಳಲ್ಲಿ ಧರ್ಮ-ನಂಬಿಕೆಗಳಿಗೆ ಮೀರಿದ ನಡವಳಿಕೆ ವಿದ್ಯಾರ್ಥಿಗಳದಾಗಿರಬೇಕು. ಹಿಜಾಬ್ ಪ್ರಕರಣವೀಗ ನ್ಯಾಯಾಲಯದಲ್ಲಿದೆ. ಇದನ್ನು ಎಲ್ಲರೂ ಒಪ್ಪಬೇಕು. ತೀರ್ಪು ಬರುವವರೆಗೂ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ, ವಿದ್ಯಾರ್ಥಿಗಳು ಯಾವುದೇ ನಂಬಿಕೆ, ಮತ, ಧರ್ಮಕ್ಕೆ ಸೇರಿದ್ದರೂ ಶಾಲಾ ಸಮವಸ್ತ್ರ ನಿಯಮಕ್ಕೆ ಬದ್ಧರಾಗಿರಬೇಕು .ನ್ಯಾಯಾಲಯ ತೀರ್ಪು ನೀಡಿದ ಅನಂತರ ಎಲ್ಲರೂ ಅದನ್ನು ಸ್ವೀಕರಿಸಬೇಕು ಎಂದು ಶಾ ಹೇಳಿದರು.

ಉಡುಪಿಯ ಸರಕಾರಿ ಕಾಲೇಜಿನಲ್ಲಿನ ಸುಮಾರು 100 ಮುಸ್ಲಿಂ ಬಾಲಕಿಯರ ಪೈಕಿ ಆರು ಮಂದಿ ಹಿಜಾಬ್ ಹೆಸರಿನಲ್ಲಿ ವಿವಾದ ಸೃಷ್ಟಿಸಿದ ಬಳಿಕ , ಮತೀಯವಾದಿ ಗುಂಪು ಮತ್ತು ವಿಪಕ್ಷ ಕಾಂಗ್ರೆಸ್ ಕುಮ್ಮಕ್ಕಿನೊಂದಿಗೆ ಇದು ಹಲವೆಡೆ ವಿಸ್ತರಿಸಿ ರಾಜ್ಯದಲ್ಲಿ ಶಾಲಾ ಶಿಕ್ಷಣಕ್ಕೆ ಭಾರೀ ಅಡಚಣೆ ಉಂಟು ಮಾಡಿರುವುದಿಲ್ಲಿ ಉಲ್ಲೇಖನೀಯ.

ಇತ್ತೀಚಿನ ಸುದ್ದಿ

ಜಾಹೀರಾತು