ಇತ್ತೀಚಿನ ಸುದ್ದಿ
ನೆಲ್ಯಾಡಿ ಸಮೀಪ ಗುಡ್ಡ ಕುಸಿತ: ಮಂಗಳೂರು- ಬೆಂಗಳೂರು ಸಂಚಾರ ಸ್ಥಗಿತ; ಭರದಿಂದ ನಡೆಯುತ್ತಿರುವ ತೆರವು ಕಾರ್ಯಾಚರಣೆ
17/07/2025, 20:09

ಉಪ್ಪಿನಂಗಡಿ(reporterkarnataka.com): ಮಂಗಳೂರು- ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಬಳಿ ಇಂದು ಗುಡ್ಡ ಕುಸಿದ ಪರಿಣಾಮ ಸಂಚಾರ ಸ್ಥಗಿತಗೊಂಡಿದೆ.
ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೊಕ್ಕಡ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ. ರಸ್ತೆ ಎರಡು ಬದಿಗಳಿಗೆ ಮಣ್ಣು ಬಿದ್ದ ಪರಿಣಾಮ ಸಂಚಾರ ಸ್ಥಗಿತಗೊಂಡಿದೆ. ಮಣ್ಣು ತೆರವು ಕಾರ್ಯಾಚರಣೆ ಆರಂಭಗೊಂಡಿದೆ.