3:42 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು

28/07/2025, 18:31

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.ಕಂ

ಕುರುವಳ್ಳಿ – ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ .ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯಲ್ಲಿ ಈಗ ಮತ್ತೊಮ್ಮೆ ಗುಡ್ಡ ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ.


56 ಕೋಟಿ ವೆಚ್ಚದಲ್ಲಿ ಹೊಸ ತುಂಗಾ ಸೇತುವೆ ಹಾಗೂ ಬೈಪಾಸ್ ರಸ್ತೆ ನಿರ್ಮಿಸಲಾಗಿತ್ತು. ಈಗ ಅತಿಯಾದ ಮಳೆಯಿಂದ ಗುಡ್ಡ ಜರಿಯುತ್ತಿದ್ದ ಮುನ್ನೆಚ್ಚರಿಕೆಯಿಂದ ತೀರ್ಥಹಳ್ಳಿ ಪೊಲೀಸರು ಬ್ಯಾರಿಕೆಡ್ ಅಳವಡಿಕೆ ಮಾಡಿದ್ದಾರೆ. ಈಗಾಗಲೇ ವಾಹನಗಳು ಸಂಚರಿಸುತ್ತಿದ್ದರು ಸಹ ತೀವ್ರ ಮಟ್ಟದಲ್ಲಿ ಗುಡ್ಡ ಕುಸಿದರೆ ಬೈಪಾಸ್ ರಸ್ತೆ ಮತ್ತೊಮ್ಮೆ ನಿರ್ಬಂಧಿಸಬೇಕಾಗುತ್ತದೆ. ಕಳೆದ ವರ್ಷ ಎರಡು ಬಾರಿ ರಸ್ತೆ ಬಂದ್ ಮಾಡಲಾಗಿತ್ತು.
ಕಳೆದ ವರ್ಷ ಉದ್ಘಾಟನೆಗೊಂಡು ಕೆಲವೇ ತಿಂಗಳ ಒಳಗಾಗಿ ತಡೆಗೋಡೆ ಕುಸಿದು ಬಿದ್ದಿತ್ತು. ನಂತರ ಎತ್ತರದಲ್ಲಿ ತಡೆಗೋಡೆ ನಿರ್ಮಾಣ ಮಾಡಿ ಗುಡ್ಡ ಜರಿಯಾದಂತೆ ಮಾಡಲಾಗಿತ್ತು. ಆದರೆ ಈಗ ಮತ್ತೆ ಜರಿಯುತ್ತಿದೆ. ಪ್ರತಿ ವರ್ಷ ಗುಡ್ಡ ಕುಸಿಯುತ್ತಿದ್ದರೆ ಇಂಜಿನಿಯರ್ ಗಳು ಮಾಡಿದ ಕೆಲಸವಾದರೂ ಏನು? ಎಂಬುದೇ ಯಕ್ಷ ಪ್ರೆಶ್ನೆಯಾಗಿ ಉಳಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು