ಇತ್ತೀಚಿನ ಸುದ್ದಿ
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವು: ಪಕ್ಷದ ಅಧ್ಯಕ್ಷ ಖರ್ಗೆ ಭೇಟಿಯಾದ ಶಾಸಕಿ ಹೆಬ್ಬಾಳಕರ್; ಅಭಿನಂದನೆ ಸಲ್ಲಿಕೆ
09/12/2022, 10:07

ಹೊಸದಿಲ್ಲಿ (reporterkarnataka.com): ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮಾಂತರ ಕ್ಷೇತ್ರ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಶಾಸಕಿ ಹೆಬ್ಬಾಳಕರ್ ಜತೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಇಬ್ಬರು ಮುಖಂಡರು ಕಾಂಗ್ರೆಸ್ ಅಧ್ಯಕ್ಷರ ಜತೆ ಚರ್ಚೆ ನಡೆಸಿದರು.