4:56 AM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಹಿಂಸೆಗೆ ಎಂದೂ ಬೆಂಬಲವಿಲ್ಲ; ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕುಲ್ವಿಂದರ್​ ಕೌರ್​ ಗೆ ನಾನು ಕೆಲಸ ಕೊಡುತ್ತೇನೆ: ಗಾಯಕ ವಿಶಾಲ್ ದದ್ಲಾನಿ

08/06/2024, 17:17

ಮುಂಬೈ(reporterkarnataka.com): ಹಿಂಸೆಯನ್ನು ನಾನು ಎಂದಿಗೂ ಬೆಂಬಲಿಸುವುದಿಲ್ಲ. ಆದರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿಯ ಸಿಟ್ಟು ಏನು ಎಂಬುದು ನನಗೆ ಚೆನ್ನಾಗಿ ಅರ್ಥ ಆಗುತ್ತದೆ. ನಟಿ, ಸಂಸದೆ ಕಂಗನಾ ರಣಾವತ್​ ಅವರಿಗೆ ಕಪಾಳಮೋಕ್ಷ ಮಾಡಿ ಕೆಲಸ ಕಳೆದುಕೊಂಡ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿ ಕುಲ್ವಿಂದರ್​ ಕೌರ್​ ಅವರು ತಾನು ನೌಕರಿ ಕೊಡಿಸುವುದಾಗಿ ಜಯಪ್ರಿಯ ಗಾಯಕ, ಸಂಗೀತ ನಿರ್ದೇಶಕ ವಿಶಾಲ್​ ದದ್ಲಾನಿ ಹೇಳಿದ್ದಾರೆ.
ಗಾಯಕ ವಿಶಾಲ್​ ದದ್ಲಾನಿ ಅವರು ಇನ್​​ಸ್ಟಾಗ್ರಾಮ್​ ಸ್ಟೋರಿಯಲ್ಲಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.
ಕುಲ್ವಿಂದರ್​ ಕೌರ್​ ವಿರುದ್ಧ ಸಿಐಎಸ್​ಎಫ್​ನವರು ಏನಾದರೂ ಕ್ರಮ ಕೈಗೊಂಡರೆ, ಅವರಿಗಾಗಿ ನನ್ನಲ್ಲಿ ಉದ್ಯೋಗ ಕಾದಿರುತ್ತದೆ ಎಂಬುದನ್ನು ನಾನು ಖಚಿತಪಡಿಸುತ್ತೇನೆ. ಜೈ ಹಿಂದ್​, ಜೈ ಜವಾನ್​, ಕೈ ಕಿಸಾನ್​’ ಎಂದು ವಿಶಾಲ್​ ದದ್ಲಾನಿ ಬರೆದುಕೊಂಡಿದ್ದಾರೆ.
ಚಂಡಿಗಢ ವಿಮಾನ ನಿಲ್ದಾಣದಲ್ಲಿ ಕಂಗನಾ ಅವರಿಗೆ
ಕಪಾಳಮೋಕ್ಷ ಮಾಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು