9:45 AM Friday27 - February 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ

ಇತ್ತೀಚಿನ ಸುದ್ದಿ

ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

05/12/2024, 19:38

ಬೆಂಗಳೂರು(reporterkarnataka.com): ರಾಜ್ಯ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ” ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿ ಅವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ ,ವಿಶೇಷ ಲೇಖನಗಳ ಪ್ರಕಟಣೆಯನ್ನು ಗುರುತಿಸಿ, ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿಯವರು 2024 ರ ಆಯವ್ಯಯದಲ್ಲಿ ಹಿರಿಯ ಪತ್ರಕರ್ತ “ವಡ್ಡರ್ಸೆ ರಘುರಾಮಶೆಟ್ಟಿ” ಅವರ ಹೆಸರಿನಲ್ಲಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಿಸಿದ್ದರು. ನ್ಯಾ.ಅಶೋಕ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪ್ರಶಸ್ತಿ ಆಯ್ಕೆ ಸಮಿತಿಯು ಒಮ್ಮತದಿಂದ ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಪ್ರಶಸ್ತಿಯು 2 ಲಕ್ಷ ರೂ.ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

*ಡಿ.ಉಮಾಪತಿ
ಪರಿಚಯ:*
ಮಾರ್ಚ್ 18,1959 ರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಜನಿಸಿದ ಡಿ. ಉಮಾಪತಿ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಆಂಗ್ಲ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಬಿ.ಎ., ಮೈಸೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಎರಡನೇ ರ‍್ಯಾಂಕ್ ಪಡೆದವರು.
ನ್ಯೂ ಇಂಡಿಯನ್ ಎಕ್ಸಪ್ರೆಸ್ ಸಮೂಹ ಸಂಸ್ಥೆಯ ಕನ್ನಡಪ್ರಭ, ಈ ಟಿವಿಯ ದೆಹಲಿ ಕರೆಸ್ಪಾಂಡೆಂಟ್ ಅಗಿ 27 ವರ್ಷಗಳ ಪರಿಣಾಮಕಾರಿ ವರದಿಗಳಿಂದ ಹೆಸರುಗಳಿಸಿದವರು.
ಪಾರ್ಲಿಮೆಂಟ್ ವರದಿ, ಚುನಾವಣಾ ವಿಶ್ಲೇಷಣೆಗಳು , ಸುಪ್ರೀಂ ಕೋರ್ಟು ಗಳಲ್ಲಿನ ನದಿ ನೀರು ನ್ಯಾಯಾಧೀಕರಣ ವ್ಯಾಜ್ಯಗಳ, ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳು, ಮತ್ತು ವಿದೇಶಾಂಗ ಸಚಿವರ ವಿದೇಶ ಪ್ರವಾಸದ ಜೊತೆಗೂಡಿ ರಾಜತಾಂತ್ರಿಕ ವರದಿಗಾರಿಕೆಯಲ್ಲಿ ವಿಶಿಷ್ಟ ಅನುಭವ ಇವರದ್ದಾಗಿದೆ.
ದೆಹಲಿಯಲ್ಲಿ ನೆಲೆಸಿರುವ ಡಿ. ಉಮಾಪತಿ ಅವರು ಆಂದೋಲನ , ರೈತ ಚಳವಳಿ, ವಿಜಯ ಕರ್ನಾಟಕ, ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ ಪತ್ರಿಕೆಗಳಿಗೆ ಅಂಕಣ ಬರಹಗಾರರಾಗಿಯೂ. ಪ್ರಸ್ತುತ ’ನ್ಯಾಯಪಥ(ಗೌರಿ ಮಿಡಿಯಾ)’ ಮತ್ತು ’ಈದಿನ’ ವೆಬ್ ಜರ್ನಲ್ ಸಂದರ್ಶಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
’ದೆಹಲಿ ನೋಟ’ , ’ಪದಕುಸಿಯೇ ನೆಲವಿಲ್ಲ’ ಉಮಾಪತಿ ಅವರ ಎರಡು ಮಹತ್ವದ ಕೃತಿಗಳು ಪ್ರಕಟವಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು